ಹೈದರಾಬಾದ್: ಮಗಳ ಸಾವಿನಿಂದ ಮನನೊಂದಿದ್ದ ತಾಯಿಯೊಬ್ಬರು ಅಪಾರ್ಟ್ಮೆಂಟ್ನ 4ನೇ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಆಂಧ್ರ ಪ್ರದೇಶದ ಹೈದರಾಬಾದ್ನಲ್ಲಿ ನಡೆದಿದೆ.
ಮಂಜುಳಾ ಆತ್ಮಹತ್ಯೆ ಮಾಡಿಕೊಂಡ ತಾಯಿ. ಮಂಜುಳಾ ಪುತ್ರಿ ಮಾನಸಾ(12) 7ನೇ ತರಗತಿ ಓದುತ್ತಿದ್ದಳು. ಮಾನಸಾ ಚಿಕ್ಕ ವಯಸ್ಸಿನಲ್ಲಿಯೇ ಅಸ್ತಮಾ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಳು. ಪೋಷಕರು ಮಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ನೀಡುತ್ತಿದ್ದರು. ಆದರೆ ಗುರುವಾರ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಮಾನಸಾ ತಾಯಿಯ ಮನೆಯಲ್ಲಿಯೇ ಮೃತಪಟ್ಟಿದ್ದಳು.
Advertisement
Advertisement
ಮೃತ ಮಂಜುಳಾಗೆ ಗಂಡು ಹಾಗೂ ಹೆಣ್ಣು ಮಗು ಇತ್ತು. ಆದರೆ ಮಗಳು ಮಾನಸಾಳ ಸಾವಿನಿಂದ ಮಂಜುಳಾ ಸಾಕಷ್ಟು ಮನನೊಂದಿದ್ದರು. ಅಲ್ಲದೆ ಇದರಿಂದ ಖಿನ್ನತೆಕ್ಕೊಳಗಾಗಿ ಅಪಾರ್ಟ್ಮೆಂಟ್ ಮೇಲಿಂದ ಜಿಗಿದಿದ್ದಾರೆ. ಪರಿಣಾಮ ಅವರಿಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Advertisement
ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಮರಣೋತ್ತರ ಪರೀಕ್ಷೆಗಾಗಿ ಮಂಜುಳಾರ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.