ತುಮಕೂರು:ನಿಗೂಢ ಖಾಯಿಲೆಯಿಂದ ನರಳುತಿದ್ದ ತಾಯಿಯ ದಯಾಮರಣಕ್ಕೆ ಅನುಮತಿ ಕೊಡುವಂತೆ ಮಗನೊಬ್ಬ ತುಮಕೂರು ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ.
ನಿಸ್ತೇಜ ಸ್ಥಿತಿಯಲ್ಲಿರುವ ತಾಯಿಯನ್ನು ಡಿಸಿ ಕಚೇರಿ ದ್ವಾರದಲ್ಲಿ ಮಲಗಿಸಿ ದಯಾಮರಣಕ್ಕಾಗಿ ಮಗ ಅಂಗಲಾಚಿದ್ದಾರೆ. ತುಮಕೂರು ನಗರದ ಗಾರ್ಡನ್ ರಸ್ತೆಯ ನಿವಾಸಿ ನಾಗರಾಜ್ ತನ್ನ ತಾಯಿ ನಾಗರತ್ನಮ್ಮಾರ ದಯಾಮರಣಕ್ಕಾಗಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ದಯಾಮರಣಕ್ಕೆ ಸುಪ್ರೀಂ ಅನುಮತಿ: ಏನಿದು ಲಿವಿಂಗ್ ವಿಲ್? ತೀರ್ಪಿನಲ್ಲಿ ಏನಿದೆ? ತಪ್ಪು ಮಾಡಿದ್ರೆ ಶಿಕ್ಷೆ ಏನು?
Advertisement
Advertisement
ಕೈಕಾಲು ಸ್ವಾದೀನ ಕಳೆದುಕೊಂಡ ನಾಗರತ್ನಮ್ಮ ಕಳೆದ 10 ವರ್ಷದಿಂದ ಹಾಸಿಗೆ ಹಿಡಿದಿದ್ದಾರೆ. ನಾಗರತ್ನಮ್ಮ ಅವರಿಗೆ ಎಷ್ಟೇ ಚಿಕಿತ್ಸೆ ಕೊಡಿಸಿದರೂ ಕಾಯಿಲೆ ಮಾತ್ರ ಗುಣಮುಖವಾಗಿರಲಿಲ್ಲ. ಇದರಿಂದ ಬೇಸತ್ತ ಮಗ ನಾಗರಾಜು ತಾಯಿಯನ್ನು ಕರೆದುಕೊಂಡು ಡಿಸಿ ಕಚೇರಿ ಬಳಿ ಹೋಗಿ ತಾಯಿಯ ದಯಾಮರಣಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.
Advertisement
ನಂತರ ತಾಯಿ ಮಗನ ಪರಿಸ್ಥಿತಿ ನೋಡಿದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅವರು ತಕ್ಷಣ ನಾಗರತ್ನಮ್ಮಾಳರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv