
ರಾಯಚೂರು: ಅಪಘಾತದಲ್ಲಿ ಗಾಯಗೊಂಡು ಪತಿ ಸಾವನ್ನಪ್ಪಿದ ಸುದ್ದಿ ತಿಳಿದು ಪತ್ನಿ ಐದು ತಿಂಗಳ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ.
ಮೃತರನ್ನು ಶೃತಿ(30) ಮತ್ತು 5 ತಿಂಗಳ ಮಗು ಅಭಿರಾಮ್ ಎಂದು ಗುರುತಿಸಲಾಗಿದೆ. ಮಂಗಳೂರು ಜಿಲ್ಲೆಯ ಅಗ್ನಿಶಾಮಕ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪತಿ ಗಂಗಾಧರ್ ಶನಿವಾರ ರಸ್ತೆ ಅಪಘಾತದಲ್ಲಿ ಸಾವನ್ನಪಿದ್ದರು. ಈ ಸುದ್ದಿ ತಿಳಿದು ಪತ್ನಿ ಶೃತಿ ದಿಕ್ಕು ಕಾಣದಂತೆ ಆಗಿ ಮನನೊಂದು ಮನೆಯ ಕಿಟಕಿಗೆ ಐದು ತಿಂಗಳ ಮಗುವಿಗೆ ನೇಣು ಹಾಕಿ ಕೊಂದು ಆ ಬಳಿಕ ಮನೆಯಲ್ಲಿನ ಫ್ಯಾನ್‍ಗೆ ತಾನು ಕೂಡ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯನ್ನು ಕೆಜಿ ಹಳ್ಳಿ, ಡಿಜೆಹಳ್ಳಿ ಘಟನೆಗೆ ಹೋಲಿಸಿದ ಗೃಹಸಚಿವ
ಮಾಹಿತಿ ತಿಳಿದು ಸ್ಥಳಕ್ಕೆ ಲಿಂಗಸೂಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಿಂಗಸೂಗೂರು ಡಿವೈಎಸ್‍ಪಿ ಎಸ್.ಎಸ್. ಹೂಲ್ಲೂರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಗಳು ಮತ್ತು ಮೊಮ್ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಮೃತರ ಶವಗಳನ್ನು ಲಿಂಗಸೂಗೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಪೊಲೀಸ್ ವಾಹನಗಳೇ ಟಾರ್ಗೆಟ್ – ದಿಡ್ಡಿ ಹನುಮಂತ ದೇಗುಲಕ್ಕೂ ಕಲ್ಲೇಟು