ರಾಯಚೂರು: ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ಮುದಗಲ್ ಬಳಿ ಕೆಕೆಆರ್‌ಟಿಸಿ ಬಸ್‌ನಲ್ಲೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಯಾದಗಿರಿಯ (Yadagiri) ಸುರಪುರ ತಾಲೂಕಿನ ಹೊಂಬಳಕಲ್ ಗ್ರಾಮದ ಶಾಂಭವಿ ಬಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ. ಇದನ್ನೂ ಓದಿ: ನಾನು ಚಿಕ್ಕಂದಿನಿಂದ ಶಿವನ ಭಕ್ತ: ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಯಶ್
ಕಾರವಾರಕ್ಕೆ ಕೂಲಿ ಕೆಲಸಕ್ಕಾಗಿ ಗುಳೆ ಹೋಗಿದ್ದ ದಂಪತಿ ವಾಪಾಸ್ ಗ್ರಾಮಕ್ಕೆ ಮರಳುತ್ತಿದ್ದಾಗ ಬಸ್‌ನಲ್ಲೇ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದೇ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಮೇರಿ ಎಂಬುವವರು ಹೆರಿಗೆ ಮಾಡಿಸಿದ್ದಾರೆ. ಇದನ್ನೂ ಓದಿ: ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ – ಯಾರಿಗೆ ಎಷ್ಟು ಕೋಟಿ? ಇಲ್ಲಿದೆ ಕಂಪ್ಲೀಟ್ ಲಿಸ್ಟ್
ಹೆರಿಗೆ ಬಳಿಕ ಅಂಬ್ಯುಲೆನ್ಸ್ ಮೂಲಕ ಬಾಣಂತಿಯನ್ನು ಮುದಗಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಕೆಕೆಆರ್‌ಟಿಸಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯನ್ನು ಪ್ರಯಾಣಿಕರು ಶ್ಲಾಘಿಸಿದ್ದಾರೆ.