ಹೈದರಾಬಾದ್: ಮದುವೆಯಾದ ಒಂದು ವರ್ಷದಲ್ಲೇ 27 ವರ್ಷದ ಅಳಿಯನೊಬ್ಬ ಪತ್ನಿಯ ತಾಯಿಯ ಮೇಲೆ ಅತ್ಯಾಚಾರ ಎಸಗಿರುವ ಹೀನಕೃತ್ಯ ನಗರದಲ್ಲಿ ನಡೆದಿದೆ.
ಆರೋಪಿಯನ್ನು ಭಾಸ್ಕರ್ ಎಂದು ಗುರುತಿಸಲಾಗಿದ್ದು, ಈ ಘಟನೆ ಜುಲೈ 31ರಂದು ಚಂದ್ರಯಂಗುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಶುಕ್ರವಾರ ಆರೋಪಿಯನ್ನು ಬಾಲಾಪುರದ ಬಳಿ ಬಂಧಿಸಿದ್ದಾರೆ. ಸದ್ಯಕ್ಕೆ ಸಂತ್ರಸ್ತೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ಆರೋಪಿ ಹೈದರಾಬಾದ್‍ನ ಕಂಡಿಕಲ್ ಪ್ರದೇಶದ ನಿವಾಸಿಯಾಗಿದ್ದು, ಸಂತ್ರಸ್ತೆಯ ಮಗಳನ್ನು ಮದುವೆಯಾಗಿ ಒಂದು ವರ್ಷವಾಗಿದೆ. ಜುಲೈ 31ರಂದು ಆರೋಪಿ ಭಾಸ್ಕರ್ ತನ್ನ ಅತ್ತೆಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಅತ್ಯಾಚಾರ ಎಸಗಿದ ನಂತರ ಅತ್ತೆಯನ್ನು ಮನೆಯ ಬಳಿ ಡ್ರಾಪ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಇದೇ ವೇಳೆ ಈ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಮಗಳಿಗೆ ವಿಚ್ಛೇದನ ಕೊಡುವುದಾಗಿ ಬೆದರಿಕೆ ಹಾಕಿದ್ದಾನೆ. ಆರೋಪಿ ಬೆದರಿಕೆಗೆ ಜಗ್ಗದ ಅತ್ತೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಪೊಲೀಸರು ಐಪಿಸಿ ಸೆಕ್ಷನ್ ಅಡಿಯಲ್ಲಿ ಭಾಸ್ಕರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.