ಹಾವೇರಿ: ಆಗತಾನೇ ಜನಿಸಿದ ನವಜಾತ ಶಿಶುವನ್ನ ನಿಷ್ಕರುಣಿ ತಾಯಿಯೊಬ್ಬಳು ಬಿಟ್ಟು ಹೋಗಿದ್ದು, ಮಗುವನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾನಗಲ್ ತಾಲೂಕಿನ ಮಾರನಬೀಡ ಗ್ರಾಮದ ಗುಡ್ಡದಲ್ಲಿ ಶಿಶು ಪತ್ತೆಯಾಗಿದೆ. ಆಗತಾನೇ ಜನಿಸಿದ ನವಜಾತ ಗಂಡು ಮಗು ಅಳುತ್ತಿದ್ದ ಧ್ವನಿ ಕೇಳಿ ಮಗುವನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸ್ಪಂದನಾ ದತ್ತು ಕೇಂದ್ರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement
ಅಲ್ಪಸ್ವಲ್ಪ ಗಾಯಗೊಂಡಿದ್ದರಿಂದ ನವಜಾತ ಶಿಶುವಿಗೆ ನರೇಗಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಅಲ್ಲದೆ ಶಿಶುವನ್ನ ಸ್ಪಂದನಾ ದತ್ತು ಕೇಂದ್ರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿಗೆ ಹಸ್ತಾಂತರ ಮಾಡಲಾಗಿದೆ. ಇದನ್ನೂ ಓದಿ: ಲೋಕಲ್ ಕಂಟೈನ್ಮೆಂಟ್‍ಗೆ ಮೋದಿ ಸಲಹೆ
Advertisement
Advertisement
ಕಿಂಚಿತ್ತೂ ಕರುಣೆ ಇಲ್ಲದಂತೆ ನವಜಾತ ಶಿಶುವನ್ನ ಗುಡ್ಡದಲ್ಲಿ ಎಸೆದು ಹೋಗಿರೋ ನಿಷ್ಕರುಣಿ ತಾಯಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ಪ್ರತಿದಿನ ಒಬ್ಬೊಬ್ಬರು ರಾಜೀನಾಮೆ ನೀಡುತ್ತಾ ಹೋಗ್ತಾರೆ: ಧರಂ ಸಿಂಗ್ ಸೈನಿ