ಹೈದರಾಬಾದ್: ಎರಡು ಮಕ್ಕಳನ್ನು ಹೊಂದಿರುವ 30 ವರ್ಷದ ಮಹಿಳೆ 15 ವರ್ಷದ ಬಾಲಕನೊಂದಿಗೆ ಓಡಿ ಹೋಗಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ.
Advertisement
ಗುಡಿವಾಡ ಪಟ್ಟಣದಲ್ಲಿ ವಾಸಿಸುತ್ತಿದ್ದ ಮಹಿಳೆ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದ ಬಾಲಕನೊಂದಿಗೆ ನಿಕಟ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. 8ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಜುಲೈ 19ರಂದು ನಾಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಕುರಿತಂತೆ ಬಾಲಕನ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕಾಲದಲ್ಲೂ ಮರ್ಡರ್ ಆಗಿತ್ತು, ಸಿದ್ದರಾಮಯ್ಯನವರಿಗೆ ಪ್ರಶ್ನಿಸೋ ಹಕ್ಕಿಲ್ಲ: ಚಕ್ರವರ್ತಿ ಸೂಲಿಬೆಲೆ
Advertisement
Advertisement
ಆರೋಪಿಯನ್ನು ಸ್ವಪ್ನಾ ಎಂದು ಗುರುತಿಸಲಾಗಿದ್ದು, ಬಾಲಕ ಹಾಗೂ ಮಹಿಳೆ ಒಂದೇ ಪ್ರದೇಶದಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ. ಆಕೆ ಎಂಟನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕನೊಂದಿಗೆ ನಿಕಟ ಸಂಬಂಧ ಬೆಳೆಸಿದ್ದಳು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಬೆಳ್ಳಾರೆ, ಸುಬ್ರಹ್ಮಣ್ಯ ಠಾಣಾ ಎಸ್‍ಐಗಳ ಎತ್ತಂಗಡಿ
Advertisement
ಜುಲೈ 26ರಂದು ಹೈದರಾಬಾದ್‍ನ ಬಾಲನಗರದಲ್ಲಿ ಮಹಿಳೆ ಮತ್ತು ಅಪ್ರಾಪ್ತ ಬಾಲಕ ಪತ್ತೆಯಾಗಿರುವ ವಿಚಾರ ತಿಳಿದು ಬಂದಿದೆ ಎಂದು ಗುಡಿವಾಡ ಟೌನ್ ಪೊಲೀಸ್ ಇನ್ಸ್‌ಪೆಕ್ಟರ್ ದುರ್ಗಾರಾವ್ ತಿಳಿಸಿದ್ದಾರೆ.