ಡಾಲಿ ಧನಂಜಯ್ (Daali Dhananjay)ನಿರ್ಮಾಣ ಹಾಗೂ ಅಭಿನಯದ ‘ಮದರ್ ಪ್ರಾಮಿಸ್’ (Mather Promise) ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಟ್ರೈಲರ್‌ನಲ್ಲಿ(Trailer) ಸ್ನೇಹ, ಮದರ್ ಸೆಂಟಿಮೆಂಟ್, ಆ್ಯಕ್ಷನ್ ಮತ್ತು ಥ್ರಿಲ್ಲರ್‌ಗಳ ಮಿಶ್ರಣ ಗಮನ ಸೆಳೆಯುತ್ತಿದೆ.
ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. ಡಾಲಿ ಧನಂಜಯ್ ನಿರ್ಮಾಣದ ಜೊತೆಗೆ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಬಹುತೇಕ ಹೊಸ ಕಲಾವಿದರೊಂದಿಗೆ ಸಿನಿಮಾ ಮೂಡಿಬಂದಿದೆ.
ಡಾಲಿ ಧನಂಜಯ್ ಅವರ ಸ್ನೇಹಿತ ಪೂರ್ಣ ಮೈಸೂರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮತ್ತೊಬ್ಬ ಸ್ನೇಹಿತ ಹರ್ಷ ಮುರುಂಡಿ ಶಿವಲಿಂಗಪ್ಪ ನಿರ್ಮಾಪಕರಾಗಿ ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಡಾಲಿ ಪಿಕ್ಚರ್ಸ್ (Daali Pictures)ಸಹಯೋಗದಲ್ಲಿ ಸಿನಿಮಾ ನಿರ್ಮಾಣವಾಗಿದೆ.
ಈಗಾಗಲೇ ಹಾಡುಗಳ ಮೂಲಕ ಗಮನ ಸೆಳೆದಿದ್ದ ‘ಮದರ್ ಪ್ರಾಮಿಸ್’ ಈಗ ಟ್ರೈಲರ್ ಮೂಲಕವೂ ಸಿನಿಪ್ರಿಯರ ಕುತೂಹಲ ಹೆಚ್ಚಿಸಿದೆ. ಟ್ರೈಲರ್‌ನಲ್ಲಿ ಫ್ರೆಂಡ್‌ಶಿಪ್, ಡಾನ್ ಗ್ಯಾಂಗ್, ಕ್ರಿಕೆಟ್ ಬೆಟ್ಟಿಂಗ್, ತಾಯಿ ಸೆಂಟಿಮೆಂಟ್ ಸೇರಿದಂತೆ ಹಲವು ಅಂಶಗಳು ಕಾಣಿಸುತ್ತವೆ.ಇದನ್ನೂ ಓದಿ: ಗೆಳೆಯನ ಆತ್ಮಹತ್ಯೆ ವಿಚಾರ ಪೊಲೀಸರಿಗೆ ತಿಳಿಸಿದ್ದೇ ಕೃಷಿ ತಾಪಂಡ
ಸಿನಿಮಾದ ಕಥೆಯ ಬಗ್ಗೆ ಈಗಾಗಲೇ ಉತ್ತಮ ಮಾತುಗಳು ಕೇಳಿಬರುತ್ತಿವೆ. ಟ್ರೈಲರ್ ನೋಡಿದ ಬಳಿಕ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಈ ಚಿತ್ರದಲ್ಲಿ ಡಾಲಿ ಧನಂಜಯ್ ಜೊತೆಗೆ ನಾಗಭೂಷಣ್, ವಿನಯ ಪ್ರಸಾದ್, ಗೀತಾ, ಗುರುದತ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.
‘ಡೇರ್ ಡೆವಿಲ್ ಮುಸ್ತಾಫ’ ಚಿತ್ರದ ನಿರ್ದೇಶಕ ಶಶಾಂಕ್ ಈ ಸಿನಿಮಾಗೆ ಕ್ರಿಯೇಟಿವ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ. ರಾಹುಲ್ ರಾಯ್ ಛಾಯಾಗ್ರಹಣ, ನವನೀತ್ ಶ್ಯಾಮ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.ಇದನ್ನೂ ಓದಿ: ತಾಯಿಯಾಗುತ್ತಿರುವ ಖುಷಿ ಹಂಚಿಕೊಂಡ ಸಮಂತಾ; ಸಿನಿಮಾ ಬಳಿಕ ಬ್ರೇಕ್
