ಲಕ್ನೋ: ಕಾಮುಕ ಮಗನೊಬ್ಬ ತಾಯಿಯನ್ನೇ ಅತ್ಯಾಚಾರಗೈದ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ.
ಈ ಘಟನೆ ಉತ್ತರ ಪ್ರದೇಶದ ಬುಲಂದರ್ ಶಹರ್ ಜಿಲ್ಲೆಯಲ್ಲಿ ಮಾರ್ಚ್ 3ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 23 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುಟುಂಬ ಸಮಾಜಕ್ಕೆ ಹೆದರುತ್ತಿತ್ತು. ಹೀಗಾಗಿ ಮಗನ ವಿರುದ್ಧವೇ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸುವಷ್ಟು ಧೈರ್ಯ ಇರಲಿಲ್ಲ. ಕೊನೆಗೆ ಹೇಗೋ ಧೈರ್ಯ ಮಾಡಿಕೊಂಡ ಆರೋಪಿ ತಂದೆ, ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಬಳಿ ನಡೆದ ಘಟನೆಯನ್ನು ವಿವರಿಸಿದ್ದಾರೆ. ಅಲ್ಲದೆ ಮಗನ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಪರಿಣಾಮ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕಣದ ತನಿಖೆ ನಡೆಸಿದ ಪೊಲೀಸ್ ಅಧಿಕಾರಿ ರವೀಂದ್ರ ಸಿಂಗ್ ಈ ಬಗ್ಗೆ ಮಾತನಾಡಿ, ಯುವಕ ಕಂಠಪೂರ್ತಿ ಮದ್ಯ ಕುಡಿದು ಮನೆಗೆ ಬಂದಿದ್ದಾನೆ. ಬಳಿಕ ನೇರವಾಗಿ ತಾಯಿ ಮಲಗಿದ್ದ ಕೋಣೆಗೆ ತೆರಳಿ ನೀಚ ಕೃತ್ಯ ಎಸಗಿದ್ದಾನೆ. ಬಳಿಕ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಸದ್ಯ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376(ರೇಪ್) ಕೇಸ್ ದಾಖಲಿಸಿಕೊಳ್ಳಲಾಗಿದ್ದು, ಜೈಲಿಗಟ್ಟಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.