– ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ರಕ್ಷಣೆ
ಕೋಲಾರ: ಪತಿಯ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿಕೊಂದ ಘಟನೆ ಮುಳಬಾಗಿಲು (Mulbagal) ತಾಲೂಕಿನ ಆಲಂಗೂರು ಗ್ರಾಮದಲ್ಲಿ ನಡೆದಿದೆ.
ಆಂದ್ರಪ್ರದೇಶ ಮೂಲದ ಬುಜ್ಜಮ್ಮ (22) ತನ್ನಿಬ್ಬರು ಮಕ್ಕಳಾದ ಸರಸ್ವತಿ (3) ಹಾಗೂ 1 ವರ್ಷದ ಮಗು ಹೇಮಾಶ್ರೀಯನ್ನು ಹತ್ಯೆ ಮಾಡಿದ್ದಾಳೆ. ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಕುವೈತ್, ಅಮೆರಿಕ ನೆಲೆಗಳ ಮೇಲೆ ಇರಾನ್ ಅಟ್ಯಾಕ್ – ಓರ್ವ ಭಾರತೀಯ ದುರ್ಮರಣ
ಮೂಲತಃ ಆಂಧ್ರದ ವಿನಾಯಕಪುರಂನ ಬಾಬು ಹಾಗೂ ಬುಜ್ಜಮ್ಮ ದಂಪತಿ ಒಂದು ವರ್ಷದಿಂದ ಆಲಂಗೂರಿನ ಮಾವಿನ ತೋಪಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ 20 ದಿನಗಳ ಹಿಂದೆ ಪತಿ ಬಾಬು ಅಪಘಾತದಲ್ಲಿ ಮೃತಪಟ್ಟಿದ್ದ. ಇದರಿಂದ ಮಹಿಳೆ ಮಾನಸಿಕ ಖಿನ್ನತೆಗೆ ಜಾರಿದ್ದಳು. ಇದರಿಂದ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ನಿರ್ಧರಿಸಿದ್ದಳು. ಈ ಸಂಬಂಧ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬರ್ತಡೇಯಂದು ಕೇಕ್ ಕಟ್ ಮಾಡಿಸಿ, ಬಳಿಕ ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ













