ಬೆಂಗಳೂರು: ನಡೆಯೋಕೆ ಆರಂಭ ಮಾಡುವ ಮಕ್ಕಳಲ್ಲಿ ತುಂಟಾಟ ಕಾಮನ್. ಬೆಳೆಯುತ್ತಾ ಬೆಳೆಯುತ್ತಾ ಅವರು ಮಾಡುವ ಚೇಷ್ಟೆಗಳು ಅಷ್ಟಿಷ್ಟಲ್ಲ. ಹೀಗೆ ತುಂಟಾಟ ಮಾಡುತ್ತಿದ್ದ ಬಾಲಕನನ್ನು ತಾಯಿ ಕಟ್ಟಿ ಹಾಕಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಏಳು ವರ್ಷದ ಬಾಲಕ ಯಾವಾಗಲೂ ತುಂಟಾಟ ಹಾಗೂ ಚೇಷ್ಟೆ ಮಾಡುತ್ತಿತ್ತು. ತನ್ನ ಮಗನ ತುಂಟಾಟವನ್ನು ಸಹಿಸಲಾಗದೆ ತಾಯಿ ಆತನ ಕೈಗಳನ್ನು ಕಟ್ಟಿ ಹಾಕಿದ್ದಾಳೆ. ಇದನ್ನು ಗಮನಿಸಿದ ಅಲ್ಲೇ ಇದ್ದ ವ್ಯಕ್ತಿಯೊಬ್ಬರು ತನ್ನ ಮೊಬೈಲ್ ನಲ್ಲಿ ಸೆರೆಹಿಡಿದ್ದಿದ್ದು, ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದಾರೆ.
ಈ ವಿಡಿಯೋ ದೆಹಲಿ ಮೂಲದ ವ್ಯಕ್ತಿಯೊಬ್ಬರಿಗೆ ಸಿಕ್ಕಿದೆ. ಬೆಂಗಳೂರು ಮೂಲದಿಂದ ಈ ವಿಡಿಯೋ ಸಿಕ್ಕಿದರಿಂದ ಬೆಂಗಳೂರು ಪೊಲೀಸರು ಹುಡುಕಾಟ ನಡೆಸಿದ್ದರು. ಕೊನೆಗೆ ಎಚ್ಎಎಲ್ ಬಳಿ ಬಾಲಕನನ್ನು ಕಟ್ಟಿ ಹಾಕಿದ್ದಾರೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿಯಿತು.
ಮಾಹಿತಿ ತಿಳಿದ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಾಲಕನನ್ನು ರಕ್ಷಿಸಿದ್ದಾರೆ. ಬಳಿಕ ತಾಯಿಯನ್ನು ವಶಕ್ಕೆ ಪಡೆದ ಪೊಲೀಸರು ಆಕೆಗೆ ಬುದ್ಧಿ ಹೇಳಿ ವಾಪಸ್ ಕಳುಹಿಸಿಕೊಟ್ಟಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv