ಮುಂಬೈ: ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ.
ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ರೈಲು ಉಲ್ಲಾಸ್‍ನಗರದಿಂದ ಮುಂಬೈಯತ್ತ ಹೋಗುತಿತ್ತು ಎನ್ನಲಾಗಿದೆ. ಈ ವೇಳೆ ಮೋಟರ್ ಮ್ಯಾನ್ ವಿಠಲವಾಡಿ ರೈಲ್ವೆ ನಿಲ್ದಾಣದ ಬಳಿ ರೈಲನ್ನು ನಿಲ್ಲಿಸಿದ್ದಾನೆ.
ಯಾವುದೇ ತಾಂತ್ರಿಕ ವೈಫಲ್ಯ ಅಥವಾ ಕೆಂಪು ಸಿಗ್ನಲ್ ನೋಡಿ ರೈಲನ್ನು ನಿಲ್ಲಿಸಲಿಲ್ಲ. ನಾನು ಕೆಲಸಕ್ಕೆ ಹೋಗುವಾಗ ರೈಲು ಎರಡು ನಿಲ್ದಾಣದ ನಡುವೆ ನಿಂತಿತ್ತು. ಆಗ ಚಾಲಕ ರೈಲಿನಿಂದ ಇಳಿದು ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಹಾಗಾಗಿ ನಾನು ಅವರ ವಿಡಿಯೋವನ್ನು ತನ್ನ ಮೊಬೈಲಿನಲ್ಲಿ ಸೆರೆ ಹಿಡಿದಿದ್ದೇನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
ಚಾಲಕನ ವೈರಲ್ ಫೋಟೋ ಹಾಗೂ ವಿಡಿಯೋಗಳು ಕೇಂದ್ರ ರೈಲ್ವೆ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
Mumbai….Motorman halts local train between two railway stops to urinate on tracks, video goes viral pic.twitter.com/D4vgBd8LJM
— Manoj Pandey (@PManoj222) July 18, 2019