– ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು
ಧಾರವಾಡ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಧಾರವಾಡ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿದ್ದವರು ತಕ್ಷಣ ಹೊರಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅವೀದ್ ಶೇಖ್ ಅವರಿಗೆ ಸೇರಿದ KA-29-ME-3528 ನೋಂದಣಿ ಸಂಖ್ಯೆಯ ರೆನಾಲ್ಟ್ ಡಸ್ಟರ್ ಕಾರು ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳಕ್ಕೆ ತೆರಳುತ್ತಿತ್ತು. ಧಾರವಾಡ ಬೈಪಾಸ್ ರಸ್ತೆಯ ಹಳಿಯಾಳ ಸೇತುವೆ ಬಳಿ ಬರುತ್ತಿದ್ದಂತೆ ಕಾರಿನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ.ಇದನ್ನೂ ಓದಿ: ತುಮಕೂರು ದಸರಾಗೆ ಅದ್ಧೂರಿ ಚಾಲನೆ – ಧ್ವಜಾರೋಹಣ ನೆರವೇರಿಸಿದ ಡಿಸಿಎಂ ಪರಮೇಶ್ವರ್
ತಕ್ಷಣ ಎಚ್ಚೆತ್ತುಕೊಂಡ ಕಾರಿನಲ್ಲಿದ್ದವರು ಹೊರಗೆ ಬಂದಿದ್ದಾರೆ. ಅವರು ಕಾರಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರಿಗೆ ವ್ಯಾಪಿಸಿದ್ದು, ಕಾರು ಸಂಪೂರ್ಣ ಸುಟ್ಟುಹೋಗಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಡೀಸೆಲ್ ಬಳಿಕ ಟಿಕೆಟ್ ರೋಲ್ ಕೊರತೆ; 3-4 ಜನರಿಗೆ ಸೇರಿ ಒಂದೇ ಟಿಕೆಟ್ ವಿತರಣೆ

