Thursday, 21st February 2019

Recent News

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ – ಅಂಬುಲೆನ್ಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ!

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಟ್ಯಾರಿನಲ್ಲಿ ನಡೆದಿದೆ.

ಪುತ್ತೂರಿನ ಪಾಲ್ತಾಡಿ ನಿವಾಸಿ ಇರ್ಷಾದ್ ಎಂಬವರು ಇಂದು ತಮ್ಮ ಫೋರ್ಡ್ ಐಕಾನ್ ಕಾರಿನಲ್ಲಿ ಪಾಲ್ತಾಡಿಯಿಂದ ಪುತ್ತೂರಿಗೆ ಹೋಗುತ್ತಿದ್ದರು. ಈ ವೇಳೆ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಕಂಡು ಬಂದಿದ್ದನ್ನು ಗಮನಿಸಿದ ಅಂಬುಲೆನ್ಸ್ ಚಾಲಕರೊಬ್ಬರು ಚಾಲಕ ಇರ್ಷಾದ್ ಗೆ ತಿಳಿಸಿದ್ದಾರೆ. ತಕ್ಷಣ ಇರ್ಷಾದ್ ಅವರು ತಮ್ಮ ಕಾರನ್ನ ಸಂಟ್ಯಾರ್ ತಿರುವಿನಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕಾರನ್ನು ಆವರಿಸಿದೆ. ಇದನ್ನೂ ಓದಿ: ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಇಂಡಿಕಾ ಕಾರ್

ಬೆಂಕಿಯ ಕೆನ್ನಾಲಿಗೆಗೆ ಕಾರು ಸಂಪೂರ್ಣ ಭಸ್ಮವಾಗಿದೆ. ಸ್ಥಳಕ್ಕೆ ಪುತ್ತೂರು ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಿದ್ದಾರೆ. ಆದ್ರೆ ಕಾರ್ ಸಂಪೂರ್ಣ ಸುಟ್ಟು ಹೋಗಿದೆ. ಪುತ್ತೂರು ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.  

Leave a Reply

Your email address will not be published. Required fields are marked *