ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ: ಕಾಂಗ್ರೆಸ್ ಕಿಡಿ

Public TV
1 Min Read
Anantkumar Hegde

ಬೆಂಗಳೂರು: ಸಂಸದ ಅನಂತಕುಮಾರ್ ಹೆಗಡೆ (Ananthkumar Hegde) ಕುಂಭಕರ್ಣನಿದ್ದಂತೆ. ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು ಎಂದು ಕಾಂಗ್ರೆಸ್ (Congress) ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ಕುರಿತು ಕಾಂಗ್ರೆಸ್ (Congress) ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. ದಲಿತ, ಹಿಂದುಳಿದ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಏಳಿಗೆಯನ್ನು ಸಹಿಸದ ವಿಕೃತ ಮನಸ್ಥಿತಿಯ ಪರಂಪರೆಯನ್ನು ಮುಂದುವರಿಸುವ ಅನಂತ್ ಕುಮಾರ್ ಹೆಗಡೆಯಂತಹ ಕ್ರಿಮಿ ಕೀಟಗಳು ಈ ದೇಶಕ್ಕೆ ಕ್ಯಾನ್ಸರ್‌ನಂತೆ ಕಾಡುತ್ತವೆ. ಈ ಕ್ಯಾನ್ಸರ್‌ಗೆ ಸಂವಿಧಾನದಲ್ಲಿ ಔಷಧವಿದೆ ಎಂದು ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಕೋಚಿಮುಲ್‌ ನೇಮಕಾತಿ ಅಕ್ರಮ – ಶಾಸಕರ ಶಿಫಾರಸು ಪತ್ರ ನೀಡಿದ ಅಭ್ಯರ್ಥಿಗಳಿಗೆ ಇಡಿ ಶಾಕ್‌

ಕಾಂಗ್ರೆಸ್ ಪಕ್ಷದ ಬಗ್ಗೆ, ಸಿದ್ದರಾಮಯ್ಯ ಅವರ ಬಗ್ಗೆ ತನ್ನ ಕೊಳಕು ನಾಲಿಗೆ ಹರಿಬಿಡುವ ಮೊದಲು ಸಂಸದನಾಗಿ ತನ್ನ ಸಾಧನೆ ಏನು ಎಂಬುದನ್ನು ಜನತೆಗೆ ತಿಳಿಸಲಿ. ಈ ಅಸಹ್ಯದ ವ್ಯಕ್ತಿಯಲ್ಲಿ ಪುರೋಹಿತಶಾಹಿಯ ಅಹಂಕಾರ ಮಿತಿ ಮೀರಿ ನರ್ತಿಸುತ್ತಿದೆ. ಈ ಅಹಂಕಾರದ ಮದ ಇಳಿಸುವ ತಾಕತ್ತು ಕನ್ನಡಿಗರಿಗೆ ಇದೆ ಎಂದು ಹರಿಹಾಯ್ದಿದೆ. ಇದನ್ನೂ ಓದಿ: ʻಸ್ವಚ್ಛತೀರ್ಥ ಅಭಿಯಾನʼಕ್ಕೆ ರಾಜ್ಯ ನಾಯಕರು ಸಾಥ್‌ – ಹುಬ್ಬಳ್ಳಿಯಲ್ಲಿ ದೇವಸ್ಥಾನ ಸ್ವಚ್ಛಗೊಳಿಸಿದ ಪ್ರಹ್ಲಾದ್‌ ಜೋಶಿ

Share This Article