ಅಧಿಕಾರ ಶಾಶ್ವತ ಅಲ್ಲ.. ಗೂಂಡಾಗಿರಿ ಮಾಡುವುದು ಸರಿಯಲ್ಲ: ‘ಕೈ’ ವಿರುದ್ಧ ಬಿ.ವೈ.ರಾಘವೇಂದ್ರ ಗುಡುಗು

Public TV
2 Min Read
BY Raghavendra 1

ಶಿವಮೊಗ್ಗ: ಅಧಿಕಾರ ಶಾಶ್ವತ ಅಲ್ಲ. ಈ ರೀತಿ ಗೂಂಡಾಗಿರಿ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ (B.Y.Raghavendra) ಗುಡುಗಿದ್ದಾರೆ.

ಬಿಜೆಪಿ (BJP) ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್‌ನವರು (Congress), ಶಾಸಕರ ಕಡೆಯವರು ಹಲ್ಲೆ ಮಾಡಿದ್ದಾರೆ. ಹಲ್ಲೆಗೆ ಮೊದಲು ಕಾರು ಜಖಂ ಮಾಡಿದ್ದರು. ಹಲ್ಲೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿಲ್ಲ. ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಜಾರ್ಜ್‌ ವಿರುದ್ಧ ಪೋಸ್ಟ್‌ – ತೆಲಂಗಾಣ ಮಾಜಿ ಪಾಲಿಕೆ ಸದಸ್ಯನ ಪುತ್ರ ಅರೆಸ್ಟ್‌

BJP Congress

ಭದ್ರಾವತಿಗೆ ಕಳಂಕ ತರುವಂತಹ ಕೆಲಸವನ್ನು ‌ಕಿಡಿಗೇಡಿಗಳು ಮಾಡುತ್ತಿದ್ದಾರೆ. ಮಟ್ಕಾ, ಜೂಜು ಇಸ್ಪೀಟು ದಂಧೆ ನಡೆಯುತ್ತಿದೆ. ಗೋಕುಲ್ ಕೃಷ್ಣನ್ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಿಸಿದ್ದಾರೆ. ಅಧಿಕಾರ ಶಾಶ್ವತ ಅಲ್ಲ, ಈ ರೀತಿ ಗೂಂಡಾಗಿರಿ ಮಾಡೋದು ಸರಿಯಲ್ಲ ಎಂದು ‘ಕೈ’ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ರಾಜಕಾರಣ ಮಾಡಲು ಕಾರ್ಯಕರ್ತರಿದ್ದಾರೆ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯಬಾರದು. ಹಾಕಿಕೊಂಡಿರುವ ಯೂನಿಫಾರ್ಮ್‌ಗೆ ಮರ್ಯಾದೆ ಕೊಟ್ಟು ಕೆಲಸ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಡುವ ಒಳ್ಳೆಯ ಕೆಲಸದ ಮೇಲೆ ಹಣೆಬರಹ ಬರೆಯುತ್ತದೆ. ಗೂಂಡಾಗಿರಿ ನಡೆಯುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕದಿಂದ ಘಂಟೆ, ಪೂಜಾ ಸಾಮಾಗ್ರಿ ಸಮರ್ಪಣೆ

ಇಡೀ ಜಿಲ್ಲೆಯಲ್ಲಿ ‌ಭದ್ರಾವತಿಯಲ್ಲಿ ಜೂಜು, ಮಟ್ಕಾ, ಇಸ್ಪೀಟು ಜೋರಾಗಿ ನಡೆಯುತ್ತಿದೆ. ಕೆಲವು ಪೊಲೀಸರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಕೆಲವು ಅಧಿಕಾರಿಗಳು ಇಂತಹ ಕೃತ್ಯಕ್ಕೆ ಷಡ್ಯಂತ್ರ ಮಾಡ್ತಿದ್ದಾರೆ. ಶಿವಮೊಗ್ಗದಲ್ಲಿ ಇಂತಹ ಕೆಟ್ಟ ರಾಜಕಾರಣ ಯಾವಾಗಲೂ ನಡೆದಿಲ್ಲ ಎಂದಿದ್ದಾರೆ.

ಸಂಸತ್ತಿನಲ್ಲಿ ಆಗಿದ್ದು ಅತ್ಯಂತ ಗಂಭೀರ ವಿಚಾರ. 3-4 ವ್ಯಕ್ತಿಗಳು ಎರಡು‌ ಮೂರು ತಿಂಗಳಿನಿಂದ ಮಾಕ್ ಟ್ರಯಲ್ ಮಾಡಿದ್ದಾರೆ. ವಿದ್ಯಾವಂತರಿದ್ದಾರೆ, ಈ ರೀತಿ ಕೆಟ್ಟ ಕೆಲಸ ಮಾಡಲು ಏನು ಕಾರಣ? ಎಲ್ಲವೂ ತನಿಖೆ ಮುಖಾಂತರ ಹೊರಗೆ ಬರಲಿದೆ. ನಾನೇ ಆದರೂ ಕರ್ನಾಟಕದವರು ಅಂದ್ರೆ ದೆಹಲಿಯಲ್ಲಿ ಹೆಚ್ಚು ಪ್ರೀತಿ. ಹೀಗಾಗಿ ಸಹಜವಾಗಿ ಮೈಸೂರಿನವರು ಅಂತಾ ಪಾಸ್ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಅಂಗನವಾಡಿಗಳ ಕರೆಂಟ್ ಬಿಲ್ ಕಟ್ಟಲು ದುಡ್ಡಿಲ್ಲ – ಫ್ಯೂಸ್ ಕಿತ್ತ ಬೆಸ್ಕಾಂ

ರಾಹುಲ್ ಗಾಂಧಿಯವರು ಪ್ರಧಾನ ಮಂತ್ರಿ ಮೋದಿ ಅವರನ್ನು ಶನಿ ಅಂದ್ರು. ಹಿಂದುಳಿದ ವರ್ಗದ ನಾಯಕನಿಗೆ ಥರ್ಡ್ ಕ್ಲಾಸ್ ಪದ ಉಪಯೋಗಿಸಿದ್ದಾರೆ. ಸುಳ್ಳು ಆರೋಪ ಮಾಡಿ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.

Share This Article