ನವದೆಹಲಿ: ವಾಲ್ಮೀಕಿ ನಿಗಮಕ್ಕೆ ಸಂಬಂಧಿಸಿದ ಸುಮಾರು 40 ಕೋಟಿ ರೂ. ಹಣ ನೇರವಾಗಿ ರಾಜ್ಯ ಸರ್ಕಾರದ ಖಜಾನೆಯಿಂದ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸ್ಪಷ್ಟೀಕರಣ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದ ಆಳ ಮತ್ತು ಅಗಲ ನೋಡಿದರೆ ಹೊಸ ತಿರುವುಗಳಿಗೆ ಕಾರಣವಾಗುತ್ತಿದೆ. ಇದಕ್ಕೆ ಅಂತ್ಯಾನೇ ಇಲ್ಲ ಅಂತ ಅನಿಸುತ್ತದೆ. ಈಗಾಗಲೇ ಹಲವಾರು ಅಕೌಂಟ್‌ಗಳನ್ನು ತೆರೆದು ಹೈದರಾಬಾದ್‌ಗೆ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಆದರೆ, ಅದು ಹಣಕಾಸು ಇಲಾಖೆಗೆ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಜೈಲೇ ಗತಿ – ಆ.3 ರವರೆಗೆ ನ್ಯಾಯಾಂಗ ಬಂಧನ
Advertisement
Advertisement
ನಮಗೆ ಇತ್ತೀಚೆಗೆ ಒಂದು ಮಾಹಿತಿ ಬಂದಿದೆ. ಮಾ.31 ರಂದು ನೇರವಾಗಿಯೇ ರಾಜ್ಯ ಸರ್ಕಾರದ ಖಜಾನೆಯಿಂದ ಸುಮಾರು 40 ಕೋಟಿ ರೂ. ಅಧಿಕೃತ ಖಾತೆಗೆ ಹೋಗದೇ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿದೆ ಎಂಬ ಮಾಹಿತಿ ಇದೆ. ಇದು ಹೇಗೆ ಹೊರಗೆ ಬಂದಿದೆ ಎಂದರೆ, ಪೇಮೆಂಟ್ ಮಾಡಿರುವ ಚಲನ್ ಅನು ಕಂಪ್ಯೂಟರ್‌ನಿಂದ ತೆಗೆದು ಹಾಕುವ ಪಯತ್ನವಾಗಿದೆ. ಆ ಹಿನ್ನೆಲೆಯಲ್ಲಿ ಖಜಾನೆಯಲ್ಲಿ ಸ್ವಲ್ಪ ಗಲಿಬಿಲಿಯಾಗಿದೆ. ಹೀಗಾಗಿ ಈ ವಿಷಯ ಹೊರಗೆ ಬಂದಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ವಿಧಾನಸಭೆಯಲ್ಲಿ ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
Advertisement
Advertisement
ಪಾಲ್ಮೀಕಿ ನಿಗಮಕ್ಕೆ ಎಷ್ಟು ಹಣ ಬಿಡುಗಡೆಯಾಗಿದೆ? ಮಾ.31 ಕ್ಕೆ ಖಜಾನೆಯಿಂದ ಹಣ ಬಿಡುಗಡೆಯಾಗಿದೆಯಾ? ಬಿಡುಗಡೆಯಾಗಿದ್ದರೆ ಯಾವ ಖಾತೆಗೆ ಬಿಡುಗಡೆಯಾಗಿದೆ. ಚಲನ್ ನಾಶ ಮಾಡುವ ಪ್ರಯತ್ನ ನಡೆದಿದೆಯೋ ಇಲ್ಲವೋ ಎನ್ನುವ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಗೋವಿಂದ ಕಾರಜೋಳ ಹಾಜರಿದ್ದರು. ಇದನ್ನೂ ಓದಿ: ಮುನಿಯಪ್ಪ ಅಳಿಯನಿಗೆ ವಿಧಾನಸಭೆ ಕಾರ್ಯದರ್ಶಿ-2 ಹುದ್ದೆ ಸೃಷ್ಟಿಗೆ ಮುಂದಾದ ಸರ್ಕಾರ: ಸಚಿವಾಲಯದ ಅಧಿಕಾರಿ ವರ್ಗ ವಿರೋಧ