ಸುರತ್ಕಲ್-ಬಿ.ಸಿ.ರೋಡ್ ಪೋರ್ಟ್ ರಸ್ತೆ ಕಾಮಗಾರಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಚಾಲನೆ

Public TV
2 Min Read
Mangaluru Brijesh Chowta

ಮಂಗಳೂರು: ಸುರತ್ಕಲ್‌ನಿಂದ ಬಿ.ಸಿ.ರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ, ರಸ್ತೆ ಇಕ್ಕೆಲಗಳ ಸ್ವಚ್ಛತಾ ಕಾರ್ಯ ಸಂಬಂಧಪಟ್ಟ ಕಾಮಗಾರಿಗಳಿಗೆ ದಕ್ಷಿಣಕನ್ನಡ (Dakshina Kannada) ಸಂಸದ ಕ್ಯಾ.ಬ್ರಿಜೇಶ್ ಚೌಟ (Brijesh Chowta) ಅವರು ಚಾಲನೆ ನೀಡಿದ್ದಾರೆ.

Brijesh Chowta

ಸುರತ್ಕಲ್‌ನ (Surathkal) ಗೋವಿಂದದಾಸ್ ಕಾಲೇಜಿನ ಸಮೀಪದ ಹೆದ್ದಾರಿ ಬಳಿ ಗುರುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಪ್ರಮುಖ ಬಂದರು ರಸ್ತೆಗಳಲ್ಲಿ ಒಂದಾಗಿರುವ ಸುರತ್ಕಲ್‌ನಿಂದ ಬಿ.ಸಿ.ರೋಡ್‌ವರೆಗಿನ ಈ ಮಾರ್ಗದ ನವೀಕರಣ ಸೇರಿ ಇತರ ಕಾಮಗಾರಿಗಳಿಗೆ ಇದೀಗ ಚಾಲನೆ ದೊರೆತಿದೆ. ಮಳೆಗಾಲಕ್ಕೂ ಮೊದಲು ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಜ್ಞಾನೋದಯ – ಕ್ಷಮೆಯಾಚಿಸಿದ ಬಂಡಿಸಿದ್ದೇಗೌಡ

ಸುರತ್ಕಲ್‌ನಿಂದ ಎಪಿಎಂಸಿ ಯಾರ್ಡ್‌ವರೆಗೆ, ಕುಳೂರಿನಿಂದ ಎ.ಜೆ ಆಸ್ಪತ್ರೆವರೆಗೆ ಹಾಗೂ ನಂತೂರಿನಿಂದ ಪಡೀಲ್‌ವರೆಗೆ ಒಟ್ಟು 11 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಡಾಮರೀಕರಣ ಹಾಗೂ ತುಂಬೆ ಬಳಿ ರಸ್ತೆಯಲ್ಲಿ ನೀರು ನಿಲ್ಲದಂತೆ ಕ್ರಾಸ್ ಡ್ರೈನೇಜ್ ವ್ಯವಸ್ಥೆ ಮುಂತಾದ ಕಾಮಗಾರಿಗಳು ನಡೆಯಲಿದೆ. ಈ ರಸ್ತೆಯನ್ನು ಅಭಿವೃದ್ದಿಪಡಿಸುವುದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುವ ಜತೆಗೆ ಬಂದರಿನಿಂದ ಸರಕು ಸಾಗಾಟ ವಾಹನಗಳ ಸಂಚಾರವೂ ಸುಗಮವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರರನ್ನು ನೀವು ಹೀಗೆ ನಡೆಸಿಕೊಳ್ಳುತ್ತೀರಾ ? – ರಾಹುಲ್‌ಗೆ ಸುಪ್ರೀಂ ತರಾಟೆ

ಬಂದರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳು ಸೂಕ್ತ ನಿರ್ವಹಣೆಯಿಲ್ಲದೆ, ಸರಕು ಸಾಗಣೆ ವಾಹನಗಳು ಹಾಗೂ ಇತರೆ ವಾಹನ ಸವಾರರ ಸುಗಮ, ಸುರಕ್ಷಿತ ಸಂಚಾರಕ್ಕೂ ಹಲವು ರೀತಿಯ ಸಮಸ್ಯೆ ಎದುರಾಗಿದ್ದವು. ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರ ಗಮನಕ್ಕೆ ಹಾಗೂ ಸಚಿವಾಲಯದ ಅಧಿಕಾರಿಗಳ ಜತೆಗೂ ಮಾತುಕತೆ ನಡೆಸಿ ಸರಿಯಾದ ನಿರ್ವಹಣೆಯಿಲ್ಲದೇ ಸೊರಗಿದ್ದ ಹೆದ್ದಾರಿಗಳ ಕಾಯಕಲ್ಪಕ್ಕೆ ಪ್ರಯತ್ನಿಸಿದ್ದು, ಇಂದಿನಿಂದ ಹೆದ್ದಾರಿಗಳ ರಿಪೇರಿ ಕೆಲಸ ಶುರುವಾಗಲಿದೆ. ಈ ಹಿನ್ನಲೆಯಲ್ಲಿ ವಿಶೇಷ ಅನುದಾನ ಒದಗಿಸಿ ಕೊಟ್ಟ ಪ್ರಧಾನಮಂತ್ರಿ ಮೋದಿ, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ: ಅಮಾಯಕರ ಹತ್ಯೆಯಿಂದ ಆಘಾತವಾಗಿದೆ ಎಂದ ಆಮೀರ್ ಖಾನ್

ಈ ಹೆದ್ದಾರಿ ಕಾಮಗಾರಿಯನ್ನು ಮುಗ್ರೋಡಿ ಕನ್ಸ್ಟ್ರಕ್ಷನ್‌ ನಡೆಸಲಿದ್ದು, ಸುರತ್ಕಲ್‌ನಿಂದ ನಂತೂರು, ಬಿ.ಸಿ.ರೋಡ್‌ನಿಂದ ಪಡೀಲ್ ಹಾಗೂ ನಂತೂರು ಜಂಕ್ಷನ್‌ನಿಂದ ಪಡೀಲ್‌ವರೆಗಿನ ಬೈಪಾಸ್ ರಸ್ತೆ ಸೇರಿದಂತೆ ಒಟ್ಟು 37.42 ಕಿಮೀ. ದೂರದ ಹೆದ್ದಾರಿಗಳ ರಿಪೇರಿ, ಮರುಡಾಂಬರೀಕರಣ ಹಾಗೂ ನಿರ್ವಹಣೆ ಕೆಲಸಗಳು ಒಟ್ಟು 28.58 ಕೋಟಿ ರೂ. ವೆಚ್ಚದಲ್ಲಿ ನಡೆಯಲಿದೆ. ಇದನ್ನೂ ಓದಿ: ರನ್ಯಾರಾವ್ ವಿರುದ್ಧ ಕಾಫಿಪೋಸಾ ಜಾರಿ – ಒಂದು ವರ್ಷ ಜೈಲೇ ಗತಿ

ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ, ಮಾಜಿ ಸಚಿವ ನಾಗರಾಜ್ ಶೆಟ್ಟಿ, ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಮಾಜಿ ಮೇಯರ್‌ಗಳಾದ ದಿವಾಕರ್ ಪಾಂಡೇಶ್ವರ್, ಜಯಾನಂದ್ ಅಂಚನ್, ಮನೋಜ್ ಕುಮಾರ್, ಎನ್‌ಹೆಚ್‌ಎಐ ಅಧಿಕಾರಿಗಳು ಮುಗ್ರೋಡಿ ಕನ್ಸ್ಟ್ರಕ್ಷನ್‌ನ ಸುಧಾಕರ್ ಶೆಟ್ಟಿ ಸೇರಿ ಹಲವರು ಉಪಸ್ಥಿತರಿದ್ದರು.

Share This Article