ಮಂಗಳೂರು: ಮಹರ್ಷಿ ವಾಲ್ಮೀಕಿ ಅವರ ಆದರ್ಶ ಮೈಗೂಡಿಸಿಕೊಂಡು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ (Captain Brijesh Chowta) ಒತ್ತಾಯಿಸಿದರು.
ಇಂದು ವಿಶ್ವಕ್ಕೆ ಮಹಾಕಾವ್ಯ ರಾಮಾಯಣವನ್ನು ಕೊಟ್ಟ ವಾಲ್ಮೀಕಿ ಮಹರ್ಷಿಯವರ ಜಯಂತಿ. ರಾಜ್ಯದಲ್ಲಿ ವಾಲ್ಮೀಕಿ ಜಯಂತಿಯನ್ನು ಬೇಸರದಲ್ಲಿ, ದುಃಖದಲ್ಲಿ ಆಚರಿಸಲಾಗುತ್ತಿದೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹ ಪರಿಸ್ಥಿತಿ ತಂದಿಟ್ಟಿದ್ದಾರೆ. ವಾಲ್ಮೀಕಿ ಮಹರ್ಷಿಯವರ ಬದುಕು ಆದರ್ಶ ದಾರಿದೀಪವಾಗಬೇಕಿತ್ತು. ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದಲ್ಲೇ ಹಗರಣ ನಡೆಸಲಾಗಿದೆ. ಹಿಂದುಳಿದ ಸಮುದಾಯಗಳ ಏಳಿಗೆಗೆ, ಅಭ್ಯುದಯಕ್ಕೆ ಮೀಸಲಿಟ್ಟ ಹಣ ಲೂಟಿ ಮಾಡಲಾಗಿದೆ. ತೆಲಂಗಾಣ ಚುನಾವಣೆಗೆ ಈ ಹಣವನ್ನು ಕಾಂಗ್ರೆಸ್ ಖರ್ಚು ಮಾಡಿದೆ. ಹಗರಣದ ಎ1 ಆರೋಪಿ ಮಾಜಿ ಸಚಿವ ನಾಗೇಂದ್ರ ಬೇಲ್ ಮೇಲೆ ಬಿಡುಗಡೆಯಾಗಿರುವುದು ದುರದೃಷ್ಟಕರ. ಜೈಲಿನಿಂದ ಹೊರಬಂದು ವಿಜಯೋತ್ಸವ ಆಚರಿಸಲಾಗಿದೆ. ಜೈಲಿಂದ ಹೊರಬಂದು ನೇರ ಹೋಗಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಸನ್ಮಾನಿಸಲಾಗಿದೆ. ಇದು ರಾಜ್ಯದ ಜನರು ತಲೆ ತಗ್ಗಿಸುವಂತೆ ಮಾಡಿದೆ ಎಂದು ಬೇಸರ ಹೊರಹಾಕಿದರು. ಇದನ್ನೂ ಓದಿ: ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು – ಸಿಎಂ ಸಿದ್ದರಾಮಯ್ಯ ಘೋಷಣೆ
Advertisement
Advertisement
ವಾಲ್ಮೀಕಿ ಹಗರಣ ಮುಖ್ಯಮಂತ್ರಿ ಅವರ ನಿರ್ದೇಶನದ ಮೇರೆಗೆ ಆಗಿರೋದು ಈಗ ಸಾಬೀತಾದಂತಾಗಿದೆ. 187 ಕೋಟಿ ಹಗರಣ ಅಲ್ಲ 84 ಕೋಟಿ ಎಂದು ಸದನದಲ್ಲಿ ಮುಖ್ಯಮಂತ್ರಿಯವರು ಒಪ್ಪಿಕೊಂಡಿದ್ದಾರೆ. ಹಗರಣದ ಹಿನ್ನೆಲೆಯಲ್ಲಿ ರಾಜೀನಾಮೆ ಪಡೆದ ಸಚಿವರಿಂದಲೇ ಈಗ ಮುಖ್ಯಮಂತ್ರಿ ಸನ್ಮಾನಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರು ಈ ಹಗರಣದಲ್ಲಿ ನೇರವಾಗಿ ಭಾಗಿಯಾಗಿರುವುದು ಈಗ ಸಾಬೀತಾದಂತಾಗಿದೆ. ಮುಖ್ಯಮಂತ್ರಿ ಅವರು ಈ ಕೂಡಲೇ ರಾಜೀನಾಮೆ ನೀಡಬೇಕು. ವಾಲ್ಮೀಕಿ ಜಯಂತಿಯ ಹಿನ್ನೆಲೆಯಲ್ಲಿ ವಾಲ್ಮೀಕಿ ಮಹರ್ಷಿಗಳ ಆದರ್ಶ ಮೈಗೂಡಿಸಿಕೊಂಡು ಈ ಕೂಡಲೇ ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
Advertisement
ಮತ್ತೆ ಚುನಾವಣೆ ಘೋಷಣೆಯಾಗಿದೆ. ಮತ್ತೆ ನಿಗಮಗಳ ಮೇಲೆ ಕಣ್ಣಿಡಲಾಗಿದೆ. ಈಗ ಮುಖ್ಯಮಂತ್ರಿ ಯಾವ ನಿಗಮದ ಮೇಲೆ ಕಣ್ಣಿಟ್ಟಿದ್ದಾರೆ ಗೊತ್ತಿಲ್ಲ. ಚುನಾವಣಾ ಖರ್ಚಿಗೆ ಕಾಂಗ್ರೆಸ್‌ಗೆ ಕರ್ನಾಟಕ ಎಟಿಎಂ ಇದ್ದಂತೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 50:50 ಅನುಪಾತದಲ್ಲಿ ಹಂಚಿಕೆಯಾಗಿರೊ 1,400 ನಿವೇಶನಗಳನ್ನ ಜಪ್ತಿ ಮಾಡಿ; ಸಿಎಂಗೆ ಬಿಜೆಪಿ ಶಾಸಕ ಆಗ್ರಹ
Advertisement
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡನ ಮೇಲೆ ಹಲ್ಲೆ ಪ್ರಕರಣ ಕುರಿತು ಮಾತನಾಡಿ, ಪ್ರಕರಣ ಇತ್ಯರ್ಥವಾಗುವ ಹೊತ್ತಲ್ಲಿ ಪೊಲೀಸ್ ಅಧಿಕಾರಿ ನೇರವಾಗಿ ಕೈ ಮಾಡಿದ್ದಾರೆ. ಪೊಲೀಸ್ ಠಾಣೆಯ ಒಳಗಡೆ ಕೂಡ ಯಾರಿಗೂ ಸುರಕ್ಷತೆ ಇಲ್ಲದ ವಾತಾವರಣವಿದೆ. ಕಾಂಗ್ರೆಸ್ ಸರ್ಕಾರದಿಂದ ಹಿಂದೂ ಕಾರ್ಯಕರ್ತರನ್ನ ಹೆದರಿಸುವ ಪ್ರಯತ್ನ ನಡೆದಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ಕಾನೂನು ಮೂಲಕ ಕೆಲಸ ಮಾಡಬೇಕು. ಕಾಂಗ್ರೆಸ್ ನಾಯಕರ ಪ್ರೇರಣೆಯಿಂದ ಕೆಲಸವನ್ನ ಮಾಡಬಾರದು, ಒತ್ತಡಕ್ಕೆ ಮಣಿಯಬಾರದು ಎಂದು ಹೇಳಿದರು.