Bengaluru City

ಇವಿಎಂ ಪರೀಕ್ಷೆ ವೇಳೆ ಎಸ್‍ಪಿಗೆ ಹಾಕಿದ ಮತ ಬಿಜೆಪಿಗೆ: ಕಾಂಗ್ರೆಸ್ ಗಂಭೀರ ಆರೋಪ

Published

on

Share this

ನವದೆಹಲಿ: ವಿದ್ಯುನ್ಮಾನ ಮತಯಂತ್ರದಲ್ಲಿ ಸಮಾಜವಾದಿ ಪಕ್ಷಕ್ಕೆ ಹಾಕಿದ ಮತ ಬಿಜೆಪಿಗೆ ಬಿದ್ದಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಏಪ್ರಿಲ್ 9ರಂದು ಮಧ್ಯಪ್ರದೇಶದ ಬಿಂಡ್ ಜಿಲ್ಲೆಯಲ್ಲಿ ನಡೆಯಲಿರುವ ಉಪಚುನಾವಣೆಗೆ ಅಲ್ಲಿನ ಚುನಾವಣಾ ಆಯೋಗ ಮಾಧ್ಯಮಗಳ ಮುಂದೆ ಶುಕ್ರವಾರ ಎವಿಎಂ ಪರೀಕ್ಷೆ ನಡೆಸಿತ್ತು. ಮತದಾರ ತಾನು ಹಾಕಿದ್ದ ಮತದಾನ ಸರಿಯಾಗಿದೆಯೇ ಎಂದು ಖಚಿತ ಪಡಿಸುವ ಮತಯಂತ್ರಗಳ ಪರೀಕ್ಷೆ ವೇಳೆ ಎಸ್‍ಪಿಗೆ ಹಾಕಿರುವ ಮತ ಬಿಜೆಪಿಗೆ ಹೋಗಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಈ ಆರೋಪಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ ಸಲೀನಾ ಸಿಂಗ್ ಪ್ರತಿಕ್ರಿಯಿಸಿದ್ದು, ಕೆಲ ಪತ್ರಕರ್ತರು ಸರಿಯಾಗಿ ತಿಳಿದುಕೊಳ್ಳದ ಕಾರಣ ತಪ್ಪು ಸುದ್ದಿ ಹರಡಿದೆ. ಯಾವುದೇ ಗೊಂದಲ ಇದರಲ್ಲಿ ಇಲ್ಲ ಎಂದು ಮಧ್ಯಮಗಳಿಗೆ ತಿಳಿಸಿದ್ದಾರೆ.

ಈ ವಿಚಾರವಾಗಿ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸುವಂತೆ ಇವತ್ತು ಕಾಂಗ್ರೆಸ್ ನಿಯೋಗ ಹಾಗೂ ದೇಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತ್ಯೇಕವಾಗಿ ಆಯೋಗದ ಅಧಿಕಾರಿಗಳನ್ನು ಭೇಟಿ ನೀಡಿ ಮನವಿ ಮಾಡಿದ್ದಾರೆ.

ಬಿಜೆಪಿಗಾಗಿ ಇವಿಎಂನಲ್ಲಿ ಸಾಫ್ಟ್ ವೇರ್ ಬದಲಾವಣೆ ಮಾಡಲಾಗಿದೆ.ಯಾವುದೇ ಬಟನ್ ಒತ್ತಿದ್ರೆ ಬಿಜೆಪಿಗೇ ಮತ ಹೋಗುತ್ತೆ. ನಾನೂ ಐಐಟಿಯಲ್ಲಿ ಎಂಜಿನಿಯರಿಂಗ್ ಓದಿದ್ದೇನೆ. ನನಗೆ ಎಲ್ಲವೂ ಗೊತ್ತಾಗುತ್ತೆ. ಇವಿಎಂನಲ್ಲಿ ಏನೋ ಸಮ್‍ಥಿಂಗ್ ಆಗಿದೆ. ಹೀಗಾಗಿ ಬ್ಯಾಲೆಟ್ ಪೇಪರ್ ಬಳಸಬೇಕು ಅಂತಾ ಕೇಜ್ರಿವಾಲ್  ಮನವಿ ಮಾಡಿದ್ದಾರೆ.

ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ತೋರಿಸಿದ ಇವಿಎಂ ಪರೀಕ್ಷೆ ಕಾರ್ಯಕ್ರಮದ ಎಲ್ಲ ವರದಿಗಳನ್ನು ನೀಡುವಂತೆ ಮಧ್ಯಪ್ರದೇಶ ಚುನಾವಣಾ ಆಯೋಗಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ. ಈ ಹಿಂದೆ ಉತ್ತರ ಪ್ರದೇಶದ ಫಲಿತಾಂಶದ ಬಳಿಕ ಮತಯಂತ್ರದ ವಿರುದ್ಧ ಮಾಜಿ ಮುಖ್ಯಮಂತ್ರಿ ಮಾಯಾವತಿ ಕೂಡಾ ಧ್ವನಿ ಎತ್ತಿದ್ದರು.

ಏನಿದು ವಿವಿಪಿಎಟಿ?
ಈ ಬಾರಿ ಕರ್ನಾಟಕದಲ್ಲಿ ನಡೆಯಲಿರುವ ಎರಡು ಉಪಚುನಾವಣೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್(ಇವಿಪಿಎಟಿ) ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಈ ವ್ಯವಸ್ಥೆಯಲ್ಲಿ ವೋಟ್ ಹಾಕಿದ 7 ಸೆಕೆಂಡ್ ಬಳಿಕ ಮತದಾರರ ಕೈಗೆ ಒಂದು ಪೇಪರ್ ಬರುತ್ತೆ. ಇದರಲ್ಲಿ ವೋಟ್ ಯಾರಿಗೆ ಬಿದ್ದಿದೆ ಎನ್ನುವುದನ್ನು ನೋಡಿಕೊಳ್ಳಬಹುದು. ಆದರೆ ಈ ಪೇಪರ್ ಅನ್ನು ಬೂತ್‍ನಿಂದ ಹೊರಗಡೆ ತೆಗೆದುಕೊಂಡು ಹೋಗುವಂತಿಲ್ಲ. ನಾನು ಹಾಕಿರುವ ಅಭ್ಯರ್ಥಿಗೆ ಮತ ಬಿದ್ದಿದೆಯೋ ಇಲ್ಲವೋ ಎನ್ನುವುದನ್ನು ಖಚಿತ ಪಡಿಸಿ ಅಲ್ಲೇ ಇರುವ ಪೆಟ್ಟಿಗೆಯ ಒಳಗಡೆ ಚೀಟಿಯನ್ನು ಹಾಕಬೇಕಾಗುತ್ತದೆ. ಇವಿಎಂ ಬಗ್ಗೆ ಹಲವು ಮಂದಿ ಆಕ್ಷೇಪ ಎತ್ತಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ವ್ಯವಸ್ಥೆಯನ್ನು ಅಳವಡಿಸುವಂತೆ ಚುನವಣಾ ಆಯೋಗಕ್ಕೆ ಕಳೆದ ವರ್ಷ ಸಲಹೆ ನೀಡಿತ್ತು.

ಮಧ್ಯಪ್ರದೇಶದ ಇವಿಎಂನಲ್ಲಿ ಲೋಪವಾಗಿದೆ ಎಂದು ತೋರಿಸಿ ಈಗ ದೇಶದೆಲ್ಲಡೆ ಸಂಚಲನಕ್ಕೆ ಕಾರಣವಾಗಿರುವ  ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅದನ್ನು ಇಲ್ಲಿ ನೀಡಲಾಗಿದೆ.

Click to comment

Leave a Reply

Your email address will not be published. Required fields are marked *

Advertisement
Advertisement