ರಾಮನಗರ: ಇಲ್ಲಿ ಎಲ್ಲರೂ ಕೂಡ ಸಚಿವ ಡಿಕೆ ಶಿವಕುಮಾರ್ ಆಪ್ತರೇ, ಮಾಧ್ಯಮದವರು ಕೂಡ ಡಿಕೆಶಿಯವರ ಆಪ್ತರು. ಯಾರಿಗೆ ಅನುಕೂಲ ಆಗುತ್ತೆ ಎಲ್ಲರಿಗೂ ಅವರು ಆಪ್ತರೇ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಇಂದು ಬೆಳಗ್ಗೆ ಕೆಐಎಡಿಬಿ ಮತ್ತು ಬಿಡಿಎ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ನಡೆಸಿತ್ತು. ಇದರಲ್ಲಿ ಆಪಾರ ಹಣ, ಆಸ್ತಿಯೊಂದಿಗೆ ಸಿಕ್ಕಿಬಿದ್ದ ಭ್ರಷ್ಟ ಅಧಿಕಾರಿ ಗೌಡಯ್ಯ ಡಿಕೆ ಶಿವಕುಮಾರ್ ಆಪ್ತರು ಎಂದು ವರದಿಯಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ ಡಿಕೆ ಸುರೇಶ್, ಎಲ್ಲರೂ ಡಿ.ಕೆ ಶಿವಕುಮಾರ್ ಆಪ್ತರೇ. ಮಾಧ್ಯಮದವರು ಕೂಡ ಅವರಿಗೆ ಮತ್ತು ಡಿಕೆ ಸುರೇಶ್‍ಗೆ ಆಪ್ತರು. ಆದರೆ ಡಿ.ಕೆ ಶಿವಕುಮಾರ್ ಆಪ್ತರಾದರೆ ನಿಮಗೂ ಕೂಡಾ ಅನುಕೂಲವಾಯಿತು ಎಂದರ್ಥವೇ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.
Advertisement
Advertisement
ಗೌಡಯ್ಯ ಅವರು ಡಿ.ಕೆ ಶಿವಕುಮಾರ್ ಇಲಾಖೆಯಲ್ಲಿ ಕೆಲಸ ಮಾಡಿಲ್ಲ. ಅವರ ಜೊತೆಯೂ ಇಲ್ಲ. ಗೌಡಯ್ಯ ಅವರು ಒಬ್ಬ ಸರ್ಕಾರಿ ಅಧಿಕಾರಿ ಅಷ್ಟೇ. ಅಲ್ಲದೇ ಸಾಕಷ್ಟು ಜನರು ಸಚಿವ ಡಿ.ಕೆ ಶಿವಕುಮಾರ್‍ಗೆ ಆಪ್ತರಿದ್ದಾರೆ. ನೀವು ಕೂಡ ಆಪ್ತರೇ ಎಂದು ಹೇಳಿದರು.
Advertisement
ಇದೇ ವೇಳೆ ರಾಮನಗರ ಉಪಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಘೋಷಣೆಯಾದ ಬಳಿಕ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಮೈತ್ರಿ ರಾಜಕೀಯ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಆದರೆ ಪಕ್ಷದ ಆಂತರಿಕವಾಗಿ ಚರ್ಚೆಯಾಗಿಲ್ಲ. ಎಲ್ಲದರ ಕುರಿತು ಪಕ್ಷದ ಮುಖಂಡರು, ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ KIADB, BDA, ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ – ಅಧಿಕಾರಿಗಳನ್ನು ನೋಡ್ತಿದ್ದಂತೇ ಕಂತೆಕಂತೆ ನೋಟುಗಳ ಬ್ಯಾಗ್ ಬಿಸಾಕಿದ್ರು!
Advertisement
ರಾಮನಗರ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣ ಅವರ ಪುತ್ರಿ ಶಾಂಭವಿ ಅವರು ಸ್ಪರ್ಧೆ ಮಾಡುವ ಕುರಿತು ಪ್ರತಿಕ್ರಿಯಿಸಿ, ಚುನಾವಣೆಯಲ್ಲಿ ಸ್ಪರ್ಧಿಸಲು ಎಲ್ಲರಿಗೂ ಅವಕಾಶವಿದೆ. ಯಾರೇ ಚುನಾವಣೆಗೆ ನಿಂತರೂ ಸ್ವಾಗತ ಮಾಡುತ್ತೇವೆ. ನಾನು ಕೂಡ ಸ್ಪರ್ಧಿಸಲು ಸಮಯ ಬಂದಾಗ ಸ್ಪರ್ಧೆ ಮಾಡುವುದಾಗಿ ತಿಳಿಸಿದರು. ಇದನ್ನೂ ಓದಿ: ಎಸಿಬಿ ದಾಳಿ ವೇಳೆ ಪಾರ್ಕಿಂಗ್ ಕಾರಿನಲ್ಲಿ ಹಣ, ಪೈಪಿನಲ್ಲಿ ಚಿನ್ನ ಪತ್ತೆ!
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv