ರಾಮನಗರ: ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಂಸದ ಡಾ.ಸಿ.ಎನ್.ಮಂಜುನಾಥ್ (CN Manjunath) ನನ್ನ ಪರವಾಗಿದ್ದಾರೆ. ದಂಪತಿ ಸಮೇತ ನನಗೆ ಬೆಂಬಲ ನೀಡುತ್ತಿದ್ದಾರೆ. ಅವರ ಆಶೀರ್ವಾದ ಯಾವಾಗಲೂ ನನ್ನ ಜೊತೆ ಇರುತ್ತದೆ. ಹಾಗಾಗಿ ಅವರ ಮೇಲೆ ನನಗೆ ಸದಾ ಗೌರವ ಇದೆ ಎಂದು ಮಾಜಿ ಸಚಿವ ಸಿಪಿ ಯೋಗೇಶ್ವರ್ (CP Yogeshwar) ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ (Channapatna Byelection) ಟಿಕೆಟ್ ಹಂಚಿಕೆ ಗೊಂದಲ ಮುಂದುವರಿದಿದ್ದು, ಮಾಜಿ ಸಚಿವ ಸಿಪಿವೈಗೆ ಟಿಕೆಟ್ ನೀಡುವ ಕುರಿತು ಸಂಸದ ಡಾ.ಮಂಜುನಾಥ್ ಬೆಂಬಲ ಇದ್ಯಾ ಎಂಬ ಪ್ರಶ್ನೆಗೆ ಸಿ.ಪಿ.ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಚನ್ನಪಟ್ಟಣ ಕ್ಷೇತ್ರದ ಐದು ಪಂಚಾಯ್ತಿ ವ್ಯಾಪ್ತಿಯ ಪ್ರಮುಖರ ಸಭೆ ಮಾಡಿದ್ದೇನೆ. ಬೆಳಗ್ಗೆ ಟೌನ್ ವ್ಯಾಪ್ತಿಯ ಸಭೆ ಮಾಡಿ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಬುಧವಾರದಿಂದ ಹಳ್ಳಿಗಳಿಗೆ ಹೋಗಿ ಜನರನ್ನು ಭೇಟಿ ಆಗುತ್ತೇನೆ. ಜನ ನನಗೆ ಸೂಕ್ತ ಸ್ಪಂದನೆ ನೀಡುತ್ತಿದ್ದಾರೆ. ಎನ್‌ಡಿಎ (NDA) ಅಭ್ಯರ್ಥಿ ಆಗಿ ನಾನು ಬರುತ್ತೇನೆ. ಆಶೀರ್ವಾದ ಮಾಡಿ ಎಂದು ಕೇಳುತ್ತಿದ್ದೇನೆ. ಇದಕ್ಕೆ ಜನರ ಪ್ರತಿಕ್ರಿಯೆ ಚೆನ್ನಾಗಿ ಸಿಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಅಗತ್ಯ ಸಿದ್ಧತೆಗೆ ಬೋಸರಾಜು ಸೂಚನೆ
ಇನ್ನೂ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಆಪರೇಷನ್ ಹಸ್ತ ಮಾಡುತ್ತಿರುವ ವಿಚಾರದ ಕುರಿತು ಮಾತನಾಡಿ, ಆಪರೇಷನ್ ಹಸ್ತದ ಪರಿಣಾಮ ಚುನಾವಣೆ ಮೇಲೆ ಬೀರಲ್ಲ. ದುಡ್ಡು ಕೊಟ್ಟು ಮುಖಂಡರನ್ನು ಸೆಳೆಯುವಂತಹ ಕೆಲಸ ನಡೆಯುತ್ತಿದೆ. ಪಾರ್ಲಿಮೆಂಟ್ ಚುನಾವಣೆಯಲ್ಲಿ ನಗರಸಭೆ ಸದಸ್ಯರನ್ನ ಕಾಂಗ್ರೆಸ್‌ನವರು ಸೆಳೆದಿದ್ದರು. ಆದರೆ ಅವರು ಕೂಡ ಈಗ ಮಾನಸಿಕವಾಗಿ ನಮಗೆ ಬೆಂಬಲ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ನಿಖಿಲ್ ಕೂಡಾ ಸಭೆ ಮಾಡುತ್ತಿದ್ದಾರೆ. ನಾನೂ ಸಭೆ ಮಾಡುತ್ತಿದ್ದೇನೆ. ಎರಡೂ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಒಟ್ಟಾಗಿ ಚುನಾವಣೆ ಮಾಡುತ್ತೇವೆ. ಚುನಾವಣೆ ಘೋಷಣೆ ಆದಮೇಲೆ ಇದಕ್ಕೆಲ್ಲ ಉತ್ತರ ಸಿಗುತ್ತೆ. ನೂರಕ್ಕೆ ನೂರುಭಾಗ ಟಿಕೆಟ್ ಸಿಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸೋಮವಾರ ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ: ಅಶ್ವಥ್ ನಾರಾಯಣ್