ನವದೆಹಲಿ: ದೇಶದಲ್ಲಿ 2025ರ ವೇಳೆಗೆ ಸುಮಾರು 1.5 ಲಕ್ಷ ತೋಟಗಾರಿಕಾ ಪದವಿಧರರ ಅವಶ್ಯಕತೆಯಿದ್ದು, ಪ್ರಸ್ತುತ 57 ತೋಟಗಾರಿಕಾ ಕಾಲೇಜುಗಳಲ್ಲಿ 10 ಸಾವಿರಕ್ಕೂ ಕಡಿಮೆ ಪದವಿಧರರು ಹೊರಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ರೈತರಿಗೆ, ಮಾರಾಟಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ICAR-IIHR ಅನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಸಂಸದ ಡಾ.ಸಿ.ಎನ್ ಮಂಜುನಾಥ್ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ಅವರು, ಈ ಬಗ್ಗೆ ಮನವಿ ನೀಡಿದರು. ಇದನ್ನೂ ಓದಿ: ನಾನು ಕಾನೂನು ಪಾಲಿಸುವ ನಾಗರಿಕ.. ತನಿಖೆಗೆ ಸಹಕರಿಸುತ್ತೇನೆ: ಜೈಲಿಂದ ರಿಲೀಸ್ ಆದ ಅಲ್ಲು ಅರ್ಜುನ್ ರಿಯಾಕ್ಷನ್
Advertisement
Advertisement
ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ICAR-IIHR ಸಂಸ್ಥೆಯು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೋಟಕಾರಿಕಾ ವಲಯದಲ್ಲಿ ಅಧಿಕ ಇಳುವರಿ ನೀಡುವ ಬೆಳೆಗಳು, ಹೆಚ್ಚು ರೋಗ ನಿರೋಧಕ ಶಕ್ತಿ ಇರುವ ಬೆಳೆಗಳ ಸಂಶೋಧನೆ, ಹೊಸ ತಂತ್ರಜ್ಞಾನಗಳ ಆವಿಷ್ಕಾರ ಮೂಲಕ ರೈತರ ಆರ್ಥಿಕ ಪ್ರಗತಿಗೆ ಸಹಕರಿಸುತ್ತಿದೆ ಎಂದು ಸಚಿವರಿಗೆ ತಿಳಿಸಿದರು. ಇದನ್ನೂ ಓದಿ: ಮೈಸೂರು| 11 ವರ್ಷಗಳ ನಂತರ ಮಾರಮ್ಮ ದೇವಸ್ಥಾನದ ಬಾಗಿಲು ಓಪನ್
Advertisement
Advertisement
ರಾಮನಗರ ಜಿಲ್ಲೆಯಾದ್ಯಂತ ಮಾವು ಹಾಗೂ ತೆಂಗು ಬೆಳೆ 90% ರಷ್ಟು ಹಾನಿಯಾಗಿದ್ದು, 50,000ಕ್ಕೂ ಅಧಿಕ ರೈತರು ನಷ್ಟ ಅನುಭವಿಸಿದ್ದಾರೆ. ಮಾವು ಬೆಳೆಗೆ 57.67 ಕೋಟಿ ರೂ. ಹಾಗೂ ತೆಂಗು ಬೆಳೆಗೆ 30.65 ಕೋಟಿ ಹಣದ ನೆರವನ್ನು ಎನ್‌ಡಿಆರ್‌ಎಫ್ (NDRF) ಅಡಿಯಲ್ಲಿ ಕಲ್ಪಿಸುವ ಮೂಲಕ ನಮ್ಮ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿದರು. ಇದನ್ನೂ ಓದಿ: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು