ಕಾರವಾರ: ಉತ್ತರ ಕನ್ನಡ ಜಿಲ್ಲೆಗೆ ಸಂಸದ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ. ಈ ಬಾರಿ ಲೋಕಸಭಾ ಚುನಾವಣೆಗೆ ಹಾಲಿ ಸಂಸದ ಅನಂತ್‌ಕುಮಾರ್ ಹೆಗಡೆ (Anantkumar Hegde) ಅವರೇ ಮತ್ತೆ ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿ ಆಗಲಿದ್ದಾರೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ತಿಳಿಸಿದ್ದಾರೆ.
ಶಿರಸಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಗೆ (Lok Sabha Elections) ಹಾಲಿ ಸಂಸದ ಅನಂತ್‌ಕುಮಾರ್ ಹೆಗಡೆ ಅವರೇ ಅಭ್ಯರ್ಥಿಯಾಗಲಿದ್ದಾರೆ. ಅಂತಿಮವಾಗಿ ಹೈಕಮಾಂಡ್ ಹಾಗೂ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧವಾಗಿದ್ದೇವೆ ಯಾರೇ ನಿಂತರು ಗೆಲ್ಲಿಸಿ ತರುತ್ತೇವೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸಗಳ ಆಧಾರದಲ್ಲಿಯೇ ಮತಯಾಚನೆ ಮಾಡುತ್ತೇವೆ. ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು. ಅದಕ್ಕಾಗಿ ಪಕ್ಷದ ವರಿಷ್ಠರು ಯಾರನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಿದರೂ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಕಾರಿನ ಮೇಲೆ ಕುಳಿತು ಮಹಿಳೆಯ ಭರ್ಜರಿ ಡಾನ್ಸ್ – ರೀಲ್ಸ್‌ಗಾಗಿ ಕಾರು ಕೊಟ್ಟ ಅಧಿಕಾರಿ ಅಮಾನತು
ಇದೇ ವೇಳೆ ಕಾವೇರಿ ಹೋರಾಟ ವಿಚಾರವಾಗಿ ಮಾತನಾಡಿ, ರಾಜ್ಯ ಸರ್ಕಾರವು ತಮಿಳುನಾಡಿಗೆ ನೀರು ಬಿಡುವುದನ್ನು ಕೂಡಲೇ ನಿಲ್ಲಿಸಬೇಕು. ಕನ್ನಡ ನಾಡಿನ ಹಿತ ಕಾಪಾಡಬೇಕು ಮತ್ತು ರಾಜ್ಯಕ್ಕೆ ನ್ಯಾಯ ಸಿಗಬೇಕು. ಬಿಜೆಪಿ-ಜೆಡಿಎಸ್ ಪಕ್ಷಗಳು ಸೇರಿ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುತ್ತೇವೆ ಎಂದರಲ್ಲದೇ, ಕಾವೇರಿ ನೀರಿನ ವಿಚಾರದಲ್ಲಿ ಅಧಿಕಾರದ ದುರ್ಬಳಕೆಯಾಗುತ್ತಿದೆ. INDIA (ಇಂಡಿಯಾ) ಮೈತ್ರಿಗಾಗಿ ರಾಜ್ಯದ ಹಿತವನ್ನ ಬಲಿ ಕೊಡಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಏಷ್ಯಾದ ಅತಿದೊಡ್ಡ ಮಾರುಕಟ್ಟೆ ಧಗ ಧಗ – ಬೆಂಕಿ ನಂದಿಸಲು ಹರಸಾಹಸ
Web Stories