ತುಮಕೂರು: ಪ್ರಜ್ವಲ್ ರೇವಣ್ಣ (Prajwal Revanna) ನನ್ನ ಆತ್ಮೀಯ ಸ್ನೇಹಿತ. ಅಂತಹ ಸ್ವಭಾವದ ಹುಡುಗ ಅಲ್ಲ ಎಂದು ಸಂಸದ ಜಿ.ಎಸ್ ಬಸವರಾಜ್ (G.S Basavaraj) ಹೇಳಿದ್ದಾರೆ.
ತುಮಕೂರಿನಲ್ಲಿ (Tumkur) ಸುದ್ದಿಗೋಷ್ಠಿ ನಡೆಸಿದ ಅವರು, ಪ್ರಜ್ವಲ್ ಅವರ ಮೇಲಿನ ಪ್ರಕರಣ ಸತ್ಯನೋ ಸುಳ್ಳೋ ಎಂಬುದು ತನಿಖೆ ಬಳಿಕ ತಿಳಿಯಲಿದೆ. ಏನು ಗ್ರಹಚಾರವೋ, ಯಾರ ಕೈವಾಡವೋ ಗೊತ್ತಿಲ್ಲ. ಇತ್ತೀಚೆಗೆ ಈ ರೀತಿ ತೇಜೋವಧೆ ಮಾಡುವುದು ಹೆಚ್ಚಾಗಿದೆ. ಜಾರಕಿಹೊಳಿಗೂ ಕೂಡ ಪಿತೂರಿ ಮಾಡಿ ಮನೆ ಹಾಳು ಮಾಡಿ ಮಾನ ಹರಾಜು ಹಾಕಿದ್ದಾರೆ ಎಂದರು.
Advertisement
ಜಾರಕಿಹೋಳಿ ಪ್ರಕರಣದಲ್ಲಿ ವಿರೋಧ ಪಕ್ಷದವರೇ ಪಿತೂರಿ ಮಾಡಿದ್ದರು. ಈಗಲೂ ಕೂಡ ವಿರೋಧ ಪಕ್ಷದವರೇ ಪಿತೂರಿ ಮಾಡಿರಬಹುದು. ಒಂದು ವೇಳೆ ಮಹಿಳೆಯರಿಗೆ ಅನ್ಯಾಯ ಆಗಿದ್ದರೆ ಶಿಕ್ಷೆ ಆಗಲೇಬೇಕು ಎಂದಿದ್ದಾರೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ನಿವಾಸಕ್ಕೆ ಎಸ್‍ಐಟಿ ತಂಡ – ಸಂತ್ರಸ್ತೆ ಸಮ್ಮುಖದಲ್ಲಿ ಸ್ಥಳ ಮಹಜರು
Advertisement
Advertisement
ಏನಿದು ಪ್ರಕರಣ?: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಪೆನ್‍ಡ್ರೈವ್ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ವೀಡಿಯೋಗಳು ವೈರಲ್ ಆಗುತ್ತಿದ್ದಂತೆ ಸಂತ್ರಸ್ತೆಯರು ಮಹಿಳಾ ಆಯೋಗದ ಮೊರೆ ಹೋಗಿದ್ದು, ಸರ್ಕಾರ ಪ್ರಕರಣದ ತನಿಖೆಗೆ ಎಸ್‍ಐಟಿ ರಚನೆ ಮಾಡಿತ್ತು. ಇದಾದ ಬೆನ್ನಲ್ಲೇ ಮಾಜಿ ಸಚಿವ ರೇವಣ್ಣ ವಿರುದ್ಧ ಸಹ ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆಯ ಅಪಹರಣದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಎಸ್‍ಐಟಿ ತನಿಖೆ ನಡೆಸುತ್ತಿದೆ. ಇನ್ನೂ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು, ಅವರಿಗೆ ಲುಕೌಟ್ ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೇ ರೇವಣ್ಣ ಸಹ ವಿದೇಶಕ್ಕೆ ತೆರಳುವ ಶಂಕೆಯ ಮೇಲೆ ಅವರ ಮೇಲೂ ಲುಕ್‍ಔಟ್ ನೋಟಿಸ್ ಜಾರಿಗೊಳಿಸಲಾಗಿದೆ.
Advertisement
ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ಆರಂಭಿಸಿರುವ ಎಸ್‍ಐಟಿ ಅಧಿಕಾರಿಗಳು, ಹೊಳೆನರಸೀಪುರದ ಅವರ ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಇದನ್ನೂ ಓದಿ: ಪೆನ್‌ಡ್ರೈವ್ ಪ್ರಕರಣ ಸದ್ದು ಮಾಡ್ತಿದ್ದಂತೇ ಅಭಿಮಾನಿಯಿಂದ ಪ್ರಜ್ವಲ್‌ಗೆ ಗೆಲುವಿನ ಶುಭಾಶಯ!