ಡಿಸೆಂಬರ್‌ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನದೊಂದಿಗೆ ಸರ್ಕಾರ ರಚಿಸುತ್ತೆ: ಕಾರಜೋಳ ಭವಿಷ್ಯ

Public TV
2 Min Read
Govind Karjol

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ʻಸೆಪ್ಟೆಂಬರ್ ಕ್ರಾಂತಿʼ ಭವಿಷ್ಯ ಸ್ಫೋಟಗೊಂಡಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ, ಕಾಂಗ್ರೆಸ್ ಪಕ್ಷದಲ್ಲಿ (Congress Party) ನಡೆಯುತ್ತಿರುವ ಮಹತ್ವದ ಚರ್ಚೆ ಈ ಸೆಪ್ಟೆಂಬರ್ ಕ್ರಾಂತಿ. ಸೆಪ್ಟೆಂಬರ್ ಸ್ಫೋಟಕ್ಕೆ ಇನ್ನೆರಡು ತಿಂಗಳಷ್ಟೇ ಬಾಕಿ. ಹಿರಿಯ ಸಚಿವ ಕೆಎನ್ ರಾಜಣ್ಣ (KN Rajanna) ನೀಡಿರುವ ಈ ಹೇಳಿಕೆ ಸದ್ಯ ರಾಜಕಾರಣದಲ್ಲಿ ನಾನಾ ಆಯಾಮದಲ್ಲಿ ವಿಶ್ಲೇಷಣೆಗೆ ಕಾರಣವಾಗ್ತಿದೆ. ಈ ನಡುವೆ ಕಾಂಗ್ರೆಸ್‌ನಲ್ಲೇ ವಾಗ್ಯುದ್ಧ ನಡೆಯುತ್ತಿದೆ.

ಈ ನಡುವೆ ಚಿತ್ರದುರ್ಗದ ಚಳ್ಳಕೆರೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಸಂಸದ ಗೋವಿಂದ ಕಾರಜೋಳ (Govind Karjol), ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲೂ ಮಧ್ಯಂತರ ಚುನಾವಣೆ ಬರಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ರೈಲ್ವೆ ಯೋಜನೆಗಳಿಗೆ ಹಣ ಕೊಡದ ರಾಜ್ಯ ಸರ್ಕಾರ – ಬಿಜೆಪಿ ನಾಯಕರಿಂದ ತೀವ್ರ ಟೀಕೆ

DK SHIVAKUMAR SIDDARAMAIAH

2028ಕ್ಕೆ ವಿಧಾನಸಭೆ ಚುನಾವಣೆ (Assembly election) ಬರುತ್ತದೆಂದು ನಾನು ಹೇಳಲ್ಲ. ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಬಹುದು. 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆಯಿದೆ. ಕಾಂಗ್ರೆಸ್ ಸರ್ಕಾರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಸಿಎಂ, ಡಿಸಿಎಂ, ಉಸ್ತುವಾರಿ ಸಚಿವರಿಗೆ ಜನ ಶಾಪ ಹಾಕ್ತಿದ್ದಾರೆಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪುರಿ ಕಾಲ್ತುಳಿತದಲ್ಲಿ ಮೂವರ ಸಾವು ಪ್ರಕರಣ – ಸಂತ್ರಸ್ತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ

ಇನ್ನೂ ಸೆಪ್ಟೆಂಬರ್ ಕ್ರಾಂತಿಗೆ ಸಚಿವರು, ಶಾಸಕರು ತಮ್ಮದೇ ಆದ ಧಾಟಿಯಲ್ಲಿ ಸಮರ್ಥನೆ ಕೊಡ್ತಿದ್ದಾರೆ. ಅಷ್ಟಕ್ಕೂ ಸೆಪ್ಟೆಂಬರ್ ಕ್ರಾಂತಿಯನ್ನು ಏನೆಲ್ಲಾ ಬದಲಾವಣೆಗಳು ಆಗಲಿದೆ ಅನ್ನೋದು ಸದ್ಯದ ಕುತೂಹಲ. ಇನ್ನು ಬಿಜೆಪಿ ನಾಯಕರು ಸೆಪ್ಟೆಂಬರ್ ಕ್ರಾಂತಿಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಡ್ತಿದ್ದಾರೆ. ವಿಪಕ್ಷ ನಾಯಕ ಅಶೋಕ್, ರಾಜಣ್ಣಕ್ಕಿಂತ ಮೊದ್ಲೇ ಹೇಳಿದ್ದೇ. ಕಾಂಗ್ರೆಸ್‌ನೊಳಗೆ ಕ್ಷಿಪ್ರ ಕ್ರಾಂತಿ ಆಗೋದು ಶತಸಿದ್ಧ ಎಂದಿದ್ದಾರೆ. ಇದನ್ನೂ ಓದಿ: ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡುವುದಿಲ್ಲ: ಡಿಕೆಶಿ

ಈ ನಡುವೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಕೆಲವೇ ದಿನಗಳಲ್ಲಿ ಈ ಸರ್ಕಾರ ಪತನ ಆಗತ್ತೆ. 2026ರಲ್ಲೇ ಎಲೆಕ್ಷನ್ ನಡೆಯುತ್ತೆ ಅಂತ ಭವಿಷ್ಯ ನುಡಿದಿದ್ದಾರೆ. ಇನ್ನು ಅಶೋಕ್ ಹೇಳಿಕೆಗೆ ಕಾಂಗ್ರೆಸ್ ನಾಯಕರು ತಿರುಗೇಟು ಕೊಟ್ಟಿದ್ದಾರೆ. ಅಶೋಕ್ ಭವಿಷ್ಯ, ಜ್ಯೋತಿಷಿ ಕಲಿತಿದ್ರೆ ನನಗೆ ಟೈಂ ಕೊಡ್ಸಿ, ನನಗೂ ಕೇಳೋದು ಇದೆ, ಅವರನ್ನ ಭೇಟಿ ಮಾಡ್ತೀನಿ ಅಂತ ಡಿಕೆಶಿ ವ್ಯಂಗ್ಯವಾಡಿದ್ದಾರೆ. ಇನ್ನುಳಿದ ಸಚಿವ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Share This Article