ವಿಜಯಪುರ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 27 ವರ್ಷಗಳ ಬಳಿಕ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಪಕ್ಷಕ್ಕೆ ಹಾಗೂ ಪ್ರಧಾನಿ ಮೋದಿಯವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಂಸದ ಗೋವಿಂದ ಕಾರಜೋಳ (Govind Karjol) ಹೇಳಿದರು.
ವಿಜಯಪುರದಲ್ಲಿ (Vijayapura) ಮಾತನಾಡಿದ ಅವರು, ದೆಹಲಿಯ ಚುನಾವಣೆ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ ಬಹುಮತ ಸಾಧಿಸಿದೆ. ನಾನು ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮೋದಿ ಅವರ ನಾಯಕತ್ವದಲ್ಲಿ 11 ವರ್ಷಗಳ ಆಡಳಿತ ಅತ್ಯುತ್ತಮವಾಗಿದೆ. ಇದಕ್ಕೆ ಶನಿವಾರ ಹೊರಬಂದಿರುವ ದೆಹಲಿ ಫಲಿತಾಂಶ ಸಾಕ್ಷಿಯಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಕಾಮುಕನಿಗೆ 20 ವರ್ಷ ಕಠಿಣ ಜೈಲು
Advertisement
Advertisement
ಕೇಜ್ರಿವಾಲ್ ಆಮ್ ಆದ್ಮಿ ಮೂಲಕ ಚುನಾವಣೆ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದರು. ಸುಳ್ಳು ಹೇಳಿ ಜನರ ಮನಸ್ಸು ಕದ್ದಿದ್ದ ಮಹಾನ್ ದ್ರೋಹಿ ಅವನು. ಸ್ವಾತಂತ್ರö್ಯ ನಂತರ ಇಡೀ ದೇಶದಲ್ಲೇ ಯಾರೂ ಮಾಡದಷ್ಟು ಭ್ರಷ್ಟಾಚಾರವನ್ನು ಅರವಿಂದ್ ಕೇಜ್ರಿವಾಲ್ ಮಾಡಿದ್ದಾನೆ. ವ್ಯವಸ್ಥಿತವಾಗಿ, ಪಾರದರ್ಶಕವಾಗಿ ಬಂದ ವ್ಯವಸ್ಥೆಯನ್ನು ಹಾಳು ಮಾಡಿ, ದುರಾಡಳಿತ ಮಾಡಿದವನು ಎಂದು ಕಿಡಿಕಾರಿದರು.
Advertisement
ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದರೂ ರಾಜೀನಾಮೆ ಕೊಡಲಿಲ್ಲ. ಅವನು ಸಂವಿಧಾನ ದ್ರೋಹಿ, ಜನರು ಅವನಿಗೆ ತಕ್ಕ ಪಾಠ ಕಲಿಸಿದ್ದಾರೆ. ದೆಹಲಿ ಕೇಂದ್ರಾಡಳಿತ ಪ್ರದೇಶ ಇದೆ. ಅದು ಹೆಚ್ಚಿನ ಮಧ್ಯಮ ವರ್ಗದವರು ಇರುವ ಊರು, ಅದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಹೆಚ್ಚು ಟ್ಯಾಕ್ಸ್ ಬರುವ ಪ್ರದೇಶದಲ್ಲಿ ಹೆಚ್ಚು ಅಭಿವೃದ್ಧಿ ಮಾಡಬೇಕಿತ್ತು. ಆದರೆ ಅಲ್ಲಿ ಓಡಾಡಲು ಆಗದ ಸ್ಥಿತಿ ಇದೆ. ದೇಶಕ್ಕೆ ಕೆಟ್ಟ ಪರಿಸ್ಥಿತಿ ತಂದಿದ್ದಾರೆ. ಕೇಜ್ರಿವಾಲ್ ಮತ್ತು ಕಾಂಗ್ರೆಸ್ ಅವರಿಗೆ ಪುಕ್ಕಟೆ ಕೊಟ್ಟು ಗೆಲ್ಲುವುದು ಒಂದು ಕೆಟ್ಟ ಸಂಪ್ರದಾಯವಾಗಿದೆ, ಇದಕ್ಕೆ ಇತಿಶ್ರೀ ಹಾಕಬೇಕಿತ್ತು ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ: ಶಾರ್ಟ್‌ಕಟ್ ರಾಜಕೀಯಕ್ಕೆ ಜನರು ಶಾರ್ಟ್ ಸರ್ಕ್ಯೂಟ್ ನೀಡಿದ್ದಾರೆ – ಇದು ವಿಕಾಸದ ಗೆಲುವು ಎಂದ ಮೋದಿ