Connect with us

Latest

ಕಾಮುಕರಿಗೆ ಸಾರ್ವಜನಿಕವಾಗಿ ಶಿಕ್ಷೆ ನೀಡ್ಬೇಕು: ಜಯಾ ಬಚ್ಚನ್

Published

on

ನವದೆಹಲಿ: ಪಶು ವೈದ್ಯೆ ಮೇಲೆ ಅತ್ಯಾಚಾರ ಎಸಗಿದ ಕಾಮುಕರಿಗೆ ಸಾರ್ವಜನಿಕವಾಗಿ ಶಿಕ್ಷೆ ನೀಡಬೇಕೆಂದು ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ಒತ್ತಾಯಿಸಿದ್ದಾರೆ.

ಈ ಕುರಿತು ಮೇಲ್ಮನೆ ಕಲಾಪದಲ್ಲಿ ಮಾತನಾಡಿದ ಅವರು, ಇಂತಹ ಕ್ರೂರ ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು. ಸರ್ಕಾರದಿಂದ ಈ ಕುರಿತು ಸ್ಪಷ್ಟ ಹಾಗೂ ದಿಟ್ಟ ಉತ್ತರವನ್ನು ಜನತೆ ನಿರೀಕ್ಷಿಸುತ್ತಿದ್ದಾರೆ. ಏನಾಗಿದೆ ಎಂಬುದು ಜನರಿಗೆ ಸ್ಪಷ್ಟವಾಗಿ ತಿಳಿದಿದೆ. ಈ ಪ್ರಕರಣವನ್ನು ಸರ್ಕಾರ ಹೇಗೆ ಬೇಧಿಸುತ್ತದೆ, ಸಂತ್ರಸ್ತೆ ಕುಟುಂಬಕ್ಕೆ ಹೇಗೆ ನ್ಯಾಯ ಒದಗಿಸುತ್ತದೆ ಎಂದು ಕಾಯುತ್ತಿದ್ದಾರೆ ಎಂದು ಭಾವುಕರಾದರು. ಇದನ್ನೂ ಓದಿ: ಕೊಲೆಗೈದ ಮೇಲೂ ಪಶುವೈದ್ಯೆ ಮೇಲೆ ಅತ್ಯಾಚಾರವೆಸೆಗಿದ ರಾಕ್ಷಸರು

ಘಟನೆ ನಡೆದ ಸ್ಥಳದಲ್ಲಿ ಅಧಿಕಾರಿಗಳು ಭದ್ರತೆ ಒದಗಿಸಲು ಯಾಕೆ ವಿಫಲರಾದರು, ಭದ್ರತಾ ಸಿಬ್ಬಂದಿ ತಮ್ಮ ಕೆಲಸವನ್ನು ಮಾಡುವಲ್ಲಿ ವಿಫಲವಾಗಿದ್ದಾರೆ. ಆರೋಪಿಗಳು ನಾಚಿಕೆಗೇಡಿನ ಕೆಲಸ ಮಾಡಿದ್ದಾರೆ, ಇಂತಹವರನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇತರ ನಾಯಕರು ಸಹ ಜಯಾ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿ, ಫಾಸ್ಟ್ ಟ್ರ್ಯಾಕ್ ಕೋರ್ಟಿಗೆ ಪ್ರಕರಣವನ್ನು ಹಸ್ತಾಂತರಿಸಿ, ಸಾಧ್ಯವಾದಷ್ಟು ಬೇಗ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ವೈದ್ಯೆಗೆ ಕೂಲ್ ಡ್ರಿಂಕ್ಸ್‌ನಲ್ಲಿ ವಿಸ್ಕಿ ಕುಡಿಸಿ ಅತ್ಯಾಚಾರಗೈದ ಪಾಪಿಗಳು

ತೃಣಮೂಲ ಕಾಂಗ್ರೆಸ್ ನಾಯಕ ಶಾಂತನು ಸೇನ್ ಮಾತನಾಡಿ, ಶಿಕ್ಷೆಯನ್ನು ಸಾರ್ವಜನಿಕವಾಗಿಯೇ ನೀಡಬೇಕು. ಅಂದರೆ ಜನ ಇಂತಹ ತಪ್ಪುಗಳನ್ನು ಮಾಡುವುದಕ್ಕೂ ಮುನ್ನ ಯೋಚಿಸುತ್ತಾರೆ ಎಂದರು.

ತೆಲಂಗಾಣ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಉಸಿರುಗಟ್ಟಿಸಿ ಕೊಂದ ಮೇಲೂ ಪಾಪಿಗಳು ಶವವನ್ನೂ ಬಿಡದೆ ಅತ್ಯಾಚಾರಗೈದಿದ್ದರು ಎನ್ನುವ ಸತ್ಯ ಬಯಲಾಗಿದೆ. ದಿನ ಕಳೆದಂತೆ ಆರೋಪಿಗಳು ಪೊಲೀಸರ ಬಳಿ ಪಶುವೈದ್ಯೆಗೆ ಯಾವ ರೀತಿಯಲ್ಲೆಲ್ಲ ಹಿಂಸೆಕೊಟ್ಟು ಕೊಲೆ ಮಾಡಲಾಯ್ತು ಎನ್ನುವ ಸತ್ಯವನ್ನು ಬಾಯಿಬಿಡುತ್ತಿದ್ದಾರೆ. ವೈದ್ಯೆಯ ಮೇಲೆ ಅವರು ಎಷ್ಟರ ಮಟ್ಟಿಗೆ ವಿಕೃತಿ ಮೆರೆದಿದ್ದಾರೆ ಎಂದರೆ ಆಕೆಯನ್ನು ಕೊಲೆ ಮಾಡಿದ ಬಳಿಕವೂ ಶವವನ್ನು ಬಿಡದೇ ಅತ್ಯಾಚಾರಗೈದಿದ್ದಾರೆ. ಇದನ್ನೂ ಓದಿ: ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ

26 ವರ್ಷದ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮಹ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳನ್ನು 14 ದಿನಗಳ ಕಾಲ ರಿಮ್ಯಾಂಡ್‍ನಲ್ಲಿ ಇರಿಸುವಂತೆ ಕೋರ್ಟ್ ಆದೇಶಿಸಿದೆ

Click to comment

Leave a Reply

Your email address will not be published. Required fields are marked *