– ಹುಚ್ಚುನಾಯಿಯಂತೆ ನನ್ನನ್ನು ಪಕ್ಷದಿಂದ ಓಡಿಸಿದ್ದಾರೆಂದು ಕುಮಾರಸ್ವಾಮಿ ಕಿಡಿ
ಕಾರವಾರ: ಮೂಡಿಗೆರೆ (Mudigere) ಬಿಜೆಪಿ (BJP) ಶಾಸಕ ಎಂಪಿ ಕುಮಾರಸ್ವಾಮಿ (MP Kumaraswamy) ಅವರು ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಎಂಪಿ ಕುಮಾರಸ್ವಾಮಿ ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ್ದು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
Advertisement
Advertisement
ಬುಧವಾರ ರಾತ್ರಿ ಬಿಜೆಪಿ ತನ್ನ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಪಟ್ಟಿಯಲ್ಲಿ ಮೂಡಿಗೆರೆಯ ಹಾಲಿ ಶಾಸಕರ ಹೆಸರು ಇರಲಿಲ್ಲ. ಕುಮಾರಸ್ವಾಮಿ ಬದಲಿಗೆ ಬಿಜೆಪಿ ದೀಪಕ್ ದೊಡ್ಡಯ್ಯ ಅವರಿಗೆ ಈ ಬಾರಿ ಅವಕಾಶ ನೀಡಿದೆ. ಇದರಿಂದ ಪಕ್ಷ ಹಾಗೂ ನಾಯಕರ ವಿರುದ್ಧ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
ಈ ಬಗ್ಗೆ ಮಾತನಾಡಿರುವ ಕುಮಾರಸ್ವಾಮಿ, ಬಿಜೆಪಿ ಪಕ್ಷದಲ್ಲಿ ನನ್ನನ್ನು ಹುಚ್ಚು ನಾಯಿ ಓಡಿಸಿದ ರೀತಿ ಪಕ್ಷದಿಂದ ಓಡಿಸಿದ್ದಾರೆ. ಇದಕ್ಕೆಲ್ಲಾ ಸಿಟಿ ರವಿ ಹಾಗೂ ಪ್ರಾಣೇಶ್ ಕಾರಣ. ಪಕ್ಷದಲ್ಲಿ ಹೀನಾಯವಾಗಿ ನನ್ನನ್ನು ನಡೆಸಿಕೊಂಡಿದ್ದಾರೆ. ಅವರೇ ಜನ ಕಳುಹಿಸಿ, ಅವರೇ ಜಗಳ ಮಾಡಿಸಿ ನನ್ನ ಮೇಲೆ ಕೆಟ್ಟ ಅಭಿಪ್ರಾಯ ಬರುವ ರೀತಿ ಮಾಡಿದರು ಎಂದು ನೋವು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಯಾಣದ ನಡುವೆಯೇ ಪಕ್ಷದ ಕೆಲಸ, ಆಹಾರ ಸೇವನೆ, ವಿಶ್ರಾಂತಿ – ಇದು ಹೆಚ್‌ಡಿಕೆ ದಿನಚರಿ
Advertisement
ಅವರು ಪಕ್ಷ ಉಳಿಸಲ್ಲ. ಸಿಟಿ ರವಿ ಬಿಜೆಪಿಗೆ ಮಾರಕ. ಮುಂದಿನ ಬಾರಿ ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ನನಗೆ ಇನ್ನೂ ವಯಸ್ಸಾಗಿಲ್ಲ, ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ. ಪಕ್ಷದಿಂದಲೇ ಸ್ಪರ್ಧೆ ಮಾಡುತ್ತೇನೆ. ಶನಿವಾರ ಸಂಜೆ ವೇಳೆಗೆ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಮಾಜದ ಮುಖಂಡರ ಕಡೆಗಣನೆ – ರಾಷ್ಟ್ರೀಯ ಪಕ್ಷಗಳ ವಿರುದ್ಧ ಭೋವಿ ಶ್ರೀ ಕಿಡಿ