CrimeLatestMain PostNational

ಉದ್ಧವ್ ಠಾಕ್ರೆ ಎಂಟ್ರಿ – 14 ದಿನಗಳ ಕಸ್ಟಡಿಗೆ ಒಳಗಾದ ಸಂಸದೆ, ಶಾಸಕ ದಂಪತಿ

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿಷಯದಲ್ಲಿ ಟೀಕೆ ಮತ್ತು ದ್ವೇಷ ಪ್ರಚೋದನ ಕೃತ್ಯಕ್ಕೆ ಸಂಬಂಧಿಸಿದಂತೆ ಸ್ವತಂತ್ರ ಸಂಸದೆ ನವನೀತ್ ರಾಣಾ ಮತ್ತು ಶಾಸಕ ಪತಿ ರವಿ ರಾಣಾ ಅವರನ್ನು 14 ದಿನಗಳ ಕಸ್ಟಡಿಗೆ ಕಳುಹಿಸಲಾಗಿದೆ.

ಭಾನುವಾರ ಮುಂಬೈ ನ್ಯಾಯಾಲಯವು ನವನೀತ್ ರಾಣಾ ಮತ್ತು ರವಿ ರಾಣಾ ಅವರ ಬಂಧನಕ್ಕೆ ನಗರ ಪೊಲೀಸರ ಬೇಡಿಕೆಯನ್ನು ತಿರಸ್ಕರಿಸಿತು. ಈ ಹಿನ್ನೆಲೆ ದಂಪತಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವನೀತ್ ರಾಣಾ ಅವರನ್ನು ಬೈಕುಲ್ಲಾ ಮಹಿಳಾ ಜೈಲಿಗೆ ಕಳುಹಿಸಲಾಗುವುದು. ಅವರ ಪತಿಯನ್ನು ಆರ್ಥರ್ ರೋಡ್ ಜೈಲಿಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಭೇಟಿಯಾಗಿ ರುದ್ರಾಕ್ಷಿ ಮಾಲೆ ನೀಡಿದ ಅನುಪಮ್ ಖೇರ್

ನಡೆದಿದ್ದೇನು?
‘ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿದ್ದಾರೆ’ ಎಂದು ಆರೋಪಿಸಿ ಮುಂಬೈ ಪೊಲೀಸರು ಶನಿವಾರ ಸಂಜೆ ಮಹಾರಾಷ್ಟ್ರದ ಅಮರಾವತಿಯ ಸಂಸದ ಬದ್ನೇರಾ ಶಾಸಕ ರವಿ ರಾಣಾ ಮತ್ತು ಅವರ ಪತ್ನಿ ನವನೀತ್ ರಾಣಾ ಅವರನ್ನು ಬಂಧಿಸಿದ್ದರು. ಇದಕ್ಕೆ ಕಾರಣ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸುವ ಯೋಜನೆಯನ್ನು ಈ ದಂಪತಿ ಹಾಕಿಕೊಂಡಿದ್ದರು. ಆದರೆ ಅವರನ್ನು ಬಂಧಿಸಿದ ಮೇಲೆ ಕಾರ್ಯಕ್ರಮವನ್ನು ರದ್ದುಗೊಳಿಸಿಲಾಯಿತು.

Hanuman Chalisa row: Court sends Rana couple to 14-day judicial custody | Deccan Herald

ಪ್ರಸ್ತುತ ದಂಪತಿ ವಿರುದ್ಧ ಸೆಕ್ಷನ್ 153(ಎ)(ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 353 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರಿಬ್ಬರನ್ನೂ ಭಾನುವಾರ ಬಾಂದ್ರಾದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರದೀಪ್ ಘರತ್ ತಿಳಿಸಿದ್ದಾರೆ.

ಸರ್ಕಾರಿ ಯಂತ್ರಕ್ಕೆ ಸವಾಲು ಹಾಕಿದ ಮತ್ತು ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಟೀಕೆಗಳನ್ನು ಮಾಡಿದ್ದರಿಂದ ಅವರ ವಿರುದ್ಧ ಐಪಿಸಿ ಸೆಕ್ಷನ್ 124-ಎ(ದೇಶದ್ರೋಹ) ಅಡಿಯಲ್ಲಿ ಆರೋಪಗಳನ್ನು ಮಾಡಲಾಗಿದೆ ಎಂದು ಪ್ರಾಸಿಕ್ಯೂಟರ್ ಹೇಳಿದರು. ಇದನ್ನೂ ಓದಿ: ಯಾಕಣ್ಣ ನನ್ನೊಬ್ಬಳನ್ನೇ ಬಿಟ್ಟು ಹೋದೆ: ರಾಜ್‌ ನೆನೆದು ತಂಗಿ ಕಣ್ಣೀರು

Leave a Reply

Your email address will not be published.

Back to top button