ಹಾಸನ: ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಗ್ನಿ ಪರೀಕ್ಷೆ ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್ (Supreme Court) ತೀರ್ಪು ಪ್ರಕಟಿಸಲಿದೆ.
ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಕಳೆದ ವರ್ಷ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಮೋದಿ ಮೆಚ್ಚಿದ್ದ ರಾಜ್ಯದ ಕವಿ ಮಂಜುನಾಥ್‌ಗೆ ದೆಹಲಿ ಗಣರಾಜ್ಯೋತ್ಸವಕ್ಕೆ ಆಹ್ವಾನ
Advertisement
Advertisement
ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಇದರಿಂದ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಇಂದು ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.
Advertisement
Advertisement
ಲೋಕಸಭಾ ಚುನಾವಣೆ ವೇಳೆಯಲ್ಲಿ ಪ್ರಮಾಣ ಪತ್ರದಲ್ಲಿ ಆಸ್ತಿ ವಿವರ ಮುಚ್ಚಿಟ್ಟ ಆರೋಪವನ್ನು ಪ್ರಜ್ವಲ್ ರೇವಣ್ಣ ಹೊತ್ತಿದ್ದಾರೆ. ಹೈಕೋರ್ಟ್‌ನಲ್ಲಿ ಪ್ರಜ್ವಲ್ ವಿರುದ್ಧ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಕಾನೂನು ಹೋರಾಟ ನಡೆಸಿದ್ದಾರೆ. ಇದನ್ನೂ ಓದಿ: ಐಸಿಸ್ ಜೊತೆ ನಂಟು; 2014 ರಲ್ಲಿ ಬಂಧಿತನಾಗಿದ್ದ ಟೆಕ್ಕಿ ದೋಷಿ ಎಂದು ಕೋರ್ಟ್ ತೀರ್ಪು