ಚಿಕ್ಕೋಡಿ: ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡುತ್ತಿರುವ ಸೇತುವೆ ಕಾಮಗಾರಿ ವಿಳಂಬ ಆಗುತ್ತಿರುವ ಕಾರಣ ಕೆಆರ್‌ಡಿಸಿಎಲ್ (ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಮಗಮದ) ಎಂಡಿ ಅವರನ್ನು ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ ಅವರು ದೂರವಾಣಿ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಂದೂರ ಬಳಿ ನಿರ್ಮಾಣ ಮಾಡುತ್ತಿರುವ ಚಂದೂರ- ಸೈನಿಕ ಟಾಕಳಿ ಸಂಪರ್ಕ ಸೇತುವೆ ಕಾಮಗಾರಿ ನಡೆಯುತ್ತಿದ್ದು. ಇದರ ಪರಶೀಲನೆಗಾಗಿ ಸಂಸದ ಪ್ರಕಾಶ್ ಹುಕ್ಕೇರಿ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಅವರು ವಿಳಂಬವಾಗಿದ್ದು ಕಂಡು ಬಂದಿದ್ದು, ತಕ್ಷಣವೇ ಎಂಡಿ ಅವರಿಗೆ ದೂರವಾಣಿ ಕರೆ ಮಾಡಿ ಸಂಸದರು ತರಾಟೆಗೆ ತೆಗೆದುಕೊಂಡಿದ್ದಾರೆ.
Advertisement
Advertisement
ಕೆಆರ್‌ಡಿಸಿಎಲ್ ದಿಂದ ನಿರ್ಮಾಣ ಮಾಡುತ್ತಿರುವ ಅಂತರಾಜ್ಯ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಮುಂಬರುವ ಮಾರ್ಚ್ ಒಳಗಾಗಿ ಸೇತುವೆ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಿದರು. ಒಂದು ವೇಳೆ ನಿಗದಿತ ಸಮಯದಲ್ಲಿ ಸೇತುವೆ ನಿರ್ಮಾಣ ಮಾಡದೆ ಹೋದರೆ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. 19 ಕೋಟಿ ರೂ. ವೆಚ್ಚದಲ್ಲಿ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಗುತ್ತಿಗೆದಾರ ಸೇತುವೆ ನಿರ್ಮಾಣ ಮಾಡಲು ವಿಳಂಬ ಮಾಡುತ್ತಿರುವದು ಏಕೆ ಎಂದು ಪ್ರಶ್ನಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews