ಬೆಂಗ್ಳೂರು- ಮೈಸೂರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ

Public TV
1 Min Read
MEMO TRAIN copy

ಬೆಂಗಳೂರು: ಬೆಂಗ್ಳೂರು- ಮೈಸೂರಿನ ನಡುವಿನ ಸಂಪರ್ಕವನ್ನು ಮತ್ತಷ್ಟು ಉತ್ತಮಪಡಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಬೆಂಗಳೂರು-ಮೈಸೂರು ರೈಲು ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಸಿಹಿಸುದ್ದಿ ನೀಡಿದೆ.

ಇಂದಿನಿಂದ ಮೈಸೂರು-ಬೆಂಗಳೂರು-ಯಲಹಂಕ ನಡುವೆ ಹೊಸ ಮೆಮು ರೈಲು ಸೇವೆ ಆರಂಭವಾಗಲಿದೆ. ಈ ಮೂಲಕ ಕ್ರಿಸ್ ಮಸ್ ಹಬ್ಬಕ್ಕೆ ಬೆಂಗಳೂರು-ಮೈಸೂರು ರೈಲು ಪ್ರಯಾಣಿಕರಿಗೆ ದೊಡ್ಡ ಗಿಫ್ಟ್ ಸಿಕ್ಕಿದೆ.

ಪ್ರತಿದಿನ ರಾತ್ರಿ ಮೈಸೂರಿನಿಂದ 10.20ಕ್ಕೆ ಹೊರಡುವ ರೈಲು 1.30ಕ್ಕೆ ಬೆಂಗಳೂರಿನ ಯಲಹಂಕ ತಲುಪಲಿದೆ. ಮುಂಜಾನೆ 2.30ಕ್ಕೆ ಯಲಹಂಕದಿಂದ ಹೊರಡುವ ರೈಲು ಮುಂಜಾನೆ 5.35ಕ್ಕೆ ಮೈಸೂರು ತಲುಪಲಿದೆ.

ಬೆಂಗಳೂರು-ಮೈಸೂರು ಮೆಮು ರೈಲು ಮಂಡ್ಯ, ಕೆಂಗೇರಿ, ಬೆಂಗಳೂರು, ಯಶವಂತಪುರದಲ್ಲಿ ಮಾತ್ರ ನಿಲುಗಡೆಯಾಗಲಿದೆ. ಮೈಸೂರಿನಿಂದ ಇಂದು ಮೆಮೋ ರೈಲು ಅರಂಭವಾಗಿದ್ದು, ಸಂಸದ ಪ್ರತಾಪ್‍ಸಿಂಹ ಚಾಲನೆ ನೀಡಿದ್ದಾರೆ.

Share This Article
1 Comment

Leave a Reply

Your email address will not be published. Required fields are marked *