ಮೈಸೂರು: ಅಧಿಕಾರ ಹೋದ ಬಳಿಕ ಸಿದ್ದರಾಮಯ್ಯ ಅವರಿಗೆ ಮಹನೀಯರು ನೆನಪಾಗುತ್ತಾರೆ ಎಂದು ವಿಪಕ್ಷ ನಾಯಕರ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಅವಕಾಶ ಸಿಗದ ಬಗ್ಗೆ ಸಿದ್ದರಾಮಯ್ಯ ಆಕ್ರೋಶ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರ ವರ್ತನೆ ಕಾಮಾಲೆ ಕಣ್ಣಿಗೆ ನೋಡುವುದೆಲ್ಲಾ ಹಳದಿ ಎಂಬಂತಾಗಿದೆ. ರಾಜ್ಯದಲ್ಲಿ ಕ್ಯಾಂಟೀನ್ ಗೆ ಹೆಸರಿಡುವಾಗ ಈ ನೆಲದ ಮಹಾ ಪುರುಷರ ಹೆಸರು ಅವರಿಗೆ ನೆನಪಾಗಲಿಲ್ಲ. ಸಿದ್ದರಾಮಯ್ಯಗೆ ಆಗ ನೆನಪಾಗಿದ್ದು ಇಂದಿರಾಗಾಂಧಿ ಹೆಸರು ಮಾತ್ರ ಎಂದರು.
ಅಧಿಕಾರದಲ್ಲಿ ಇರುವಾಗ ಅವರಿಗೆ ಮಹನೀಯರು ನೆನಪಾಗುವುದಿಲ್ಲ. ಅಧಿಕಾರ ಹೋದ ಮೇಲೆ ಮಹನೀಯರು ನೆನಪಾಗುತ್ತಾರೆ. ನಾರಾಯಣ ಗುರುಗಳು, ಒನಕೆ ಓಬವ್ವ, ಮೈಸೂರು ಮಹಾರಾಜರು ಎಂದಿಗೂ ಸಿದ್ದರಾಮಯ್ಯಗೆ ಅಧಿಕಾರದಲ್ಲಿ ಇದ್ದಾಗ ನೆನಪಾಗಲಿಲ್ಲ. ಈಗ ಭೂತದ ಬಾಯಲ್ಲಿ ಭಗವದ್ಗಿತೆ ಎಂಬಂತೆ ಮಹನೀಯರಿಗೆ ಗೌರವ ಕೊಡುವುದನ್ನು ನಮಗೆ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ತಜ್ಞರು ಗ್ರೀನ್ ಸಿಗ್ನಲ್ ಕೊಟ್ರೆ ಬೆಂಗಳೂರಿನಲ್ಲಿ ಮರು ದಿನವೇ ಶಾಲೆ ಪ್ರಾರಂಭ: ಬಿಸಿ ನಾಗೇಶ್
ಗಣರಾಜ್ಯೋತ್ಸವದಲ್ಲಿ ಒಂದು ವಿಷಯ ಕೊಟ್ಟಿದ್ದಾರೆ. ಆ ವಿಷಯಕ್ಕೆ ಅನುಗುಣವಾಗಿ ಯಾರು ಸ್ತಬ್ಧಚಿತ್ರ ಮಾಡಿರುತ್ತಾರೋ ಗುಣಮಟ್ಟದ ಆಧಾರದ ಮೇಲೆ ಅದರ ಆಯ್ಕೆ ಆಗುತ್ತದೆ. ಆಯ್ಕೆ ಪ್ರಕ್ರಿಯೆ ಪಾರದಾರ್ಶಕವಾಗಿರುತ್ತೆ. ಇಲ್ಲಿ ಯಾರ ಅವಮಾನದ ಪ್ರಶ್ನೆಯೆ ಇರುವುದಿಲ್ಲ. ಸಿದ್ದರಾಮಯ್ಯ ಅವರು ಮೊದಲು ಗಣರಾಜ್ಯೋತ್ಸವದ ಸ್ತಬ್ಧಚಿತ್ರಗಳ ಮಾರ್ಗ ಸೂಚಿ ಓದಿಕೊಳ್ಳಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಎಸ್‌ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ, ಅಖಿಲೇಶ್ ಯಾದವ್ ನಾದಿನಿ ಬಿಜೆಪಿ ಸೇರ್ಪಡೆ
ಕೇರಳ ಸರ್ಕಾರವು ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರಸ್ತುತಪಡಿಸಲು ಪ್ರಸ್ತಾಪವನ್ನು ಕಳಿಸಿತ್ತು. ಆದರೆ ಇದನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಕೇರಳ ಗಣರಾಜ್ಯೋತ್ಸವ ಪರೇಡ್‍ನಿಂದ ಹೊರಗುಳಿದಿದೆ. ಸದ್ಯ ಇದು ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಮಾಜಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ನಿರಾಕರಿಸುವ ಮೂಲಕ ಅವರಿಗೆ ಅವಮಾನ ಮಾಡಲಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.