ನವದೆಹಲಿ: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ದೀಪಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಇದು 21ನೇ ಕೊಲೆಯಾಗಿದ್ದು ಇನ್ನು ಎಷ್ಟು ಕೊಲೆ ನಡೆಯಬೇಕು ಎಂದು ಸಿದ್ದರಾಮಯ್ಯ, ಕಾಂಗ್ರೆಸ್, ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ರಮಾನಾಥ ರೈ ಮತ್ತು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಪ್ರಶ್ನಿಸಿದ್ದಾರೆ.
Advertisement
ಈ ಕುರಿತು ಕೊಲೆಯಾದ ಹಿಂದೂ ಕಾರ್ಯಕರ್ತ ದೀಪಕ್ ಅವರ ಕೊಲೆಯ ರಕ್ತಸಿಕ್ತ ಫೋಟೋಗಳನ್ನ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಸಂಸದರು, ಜಿಹಾದಿಗಳ ಕ್ರೂರ ಮುಖವನ್ನು ಅರ್ಥ ಮಾಡಿಕೊಳ್ಳಲು ಈ ಫೋಟೋಗಳನ್ನು ನೋಡಲೇ ಬೇಕು. ಈಗ ನೀವು ಇದನ್ನ ಅರ್ಥ ಮಾಡಿಕೊಳ್ಳದಿದ್ದರೆ ಮುಂದಿನ ಭವಿಷ್ಯ ಯೋಚಿಸಿ ಎಂದು ಟ್ವೀಟ್ ನಲ್ಲಿ ಖಾರವಾಗಿ ಬರೆದುಕೊಂಡಿದ್ದಾರೆ.
Advertisement
Advertisement
ಇಂದು ಬೆಳಗ್ಗೆಯಿಂದಲೂ ಸಂಸದರು ದೀಪಕ್ ಹತ್ಯೆ ಕುರಿತು ಹಲವು ಸರಣಿ ಟ್ವೀಟ್‍ಗಳನ್ನು ಮಾಡಿದ್ದು, ಪ್ರಕರಣವನ್ನು ಐಎನ್‍ಎ ತನಿಖೆಗೆ ವಹಿಸಬೇಕು ಎಂಬುದರ ಕುರಿತು ಕೇಂದ್ರ ಗೃಹ ಸಚಿವ ರಾಜ್‍ನಾಥ್ ಸಿಂಗ್, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿರುವ ಕುರಿತು ತಮ್ಮ ಟ್ವೀಟ್‍ಗಳಲ್ಲಿ ತಿಳಿಸಿದ್ದಾರೆ. ಇದಕ್ಕೂ ಮುನ್ನ ದೆಹಲಿಯ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದ್ದರು.