ಬೆಂಗಳೂರು: ಮೈಸೂರಿನಲ್ಲಿ ಶುಕ್ರವಾರ ನಡೆದ ಯುವ ದಸರಾ ಕಾರ್ಯಕ್ರಮದ ವೇಳೆ ವೇದಿಕೆಯಲ್ಲೇ ಗಾಯಕ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡಾಗೆ ಪ್ರಪೋಸ್ ಮಾಡಿರುವುದು ಭಾರೀ ವಿವಾದಕ್ಕೀಡಾಗಿದೆ. ಈ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು, ಮಹಾಅಪರಾಧ ಮಾಡಿದವನಂತೆ ಚಂದನ್ ಶೆಟ್ಟಿಯನ್ನು ಕಾಣುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.
Advertisement
ಈ ಸಂಬಂಧ ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ಸಂಸದರು, “ಯುವ ದಸರಾದಲ್ಲಿ 2 ಗಂಟೆ ಮೈಸೂರಿಗರ ಮನಸ್ಸಿಗೆ ಮುದ ಕೊಟ್ಟು 2 ಸೆಕೆಂಡ್ ಪ್ರೇಮ ನಿವೇದನೆ ಮಾಡಿಕೊಂಡ ಚಂದನ್ ಶೆಟ್ಟಿಯವರನ್ನು ಏನೋ ಮಹಾಪರಾಧ ಮಾಡಿದವನಂತೆ ಕಾಣುವುದು ಸಾಕು. ಇಬ್ಬರಿಗೂ ಒಳ್ಳೆಯದಾಗಲಿ” ಎಂದು ಹೇಳಿದ್ದಾರೆ. ಅಲ್ಲದೆ ಚಂದನ್, ನಿವೇದಿತಾಗೆ ಪ್ರಪೋಸ್ ಮಾಡಿರುವ ಫೋಟೋವೊಂದನ್ನು ಕೂಡ ಅಪ್ಲೋಡ್ ಮಾಡಿದ್ದಾರೆ. ಇದನ್ನೂ ಓದಿ: ನಿಶ್ಚಿತಾರ್ಥ ಅಲ್ಲ, ನಮ್ಗೂ ಸರ್ಪ್ರೈಸ್ ಆಗಿದೆ- ನಿವೇದಿತಾ ಹೆತ್ತವರು
Advertisement
Advertisement
ಟೀಕೆಯ ಕಮೆಂಟ್ ಬರಲಾರಂಭಿಸುತ್ತಿದ್ದಂತೆ ಪ್ರತಾಪ್ ಸಿಂಹ ಫೇಸ್‍ಬುಕ್ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಇದನ್ನೂ ಓದಿ: ತಪ್ಪಾಗಿದ್ದರೆ ಕ್ಷಮೆ ಇರಲಿ, ಸರ್ಪ್ರೈಸ್ ಕೊಡಲು ಈ ರೀತಿ ಮಾಡಿದೆ: ಚಂದನ್ ಶೆಟ್ಟಿ
Advertisement
ವೇದಿಕೆಯಲ್ಲಿ ನಡೆದಿದ್ದೇನು..?
ನಿನ್ನೆ ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್, ನಿವೇದಿತಾ ಪೋಷಕರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮ ನೀಡಿ ಜನರನ್ನು ಮನರಂಜಿಸುತ್ತಿದ್ದ ಚಂದನ್ ವೇದಿಕೆಯಲ್ಲೇ ನಿವೇದಿತಾಳಿಗೆ ಮಂಡಿಯೂರಿ ಪ್ರಪೋಸ್ ಮಾಡಿದ್ದರು ಅಲ್ಲದೆ ಉಂಗುರ ಕೂಡ ತೊಡಿಸಿದ್ದರು. ಈ ವೇಳೆ ನೆರೆದಿದ್ದ ಮಂದಿ ಶಿಳ್ಳೆ ಹೊಡೆದು ಚಪ್ಪಾಳೆ ತಟ್ಟುವ ಮೂಲಕ ಇಬ್ಬರನ್ನೂ ಅಭಿನಂದಿಸಿದರು.
ಆದರೆ ಈ ಬೆನ್ನಲ್ಲೇ ಪ್ರಪೋಸ್ ಮಾಡಿರುವ ವಿಚಾರ ಭಾರೀ ವಿವಾದಕ್ಕೀಡಾಯಿತು. ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಇದು ಬೇಡವಾಗಿತ್ತು ಎಂದು ಅನೇಕರು ಖಂಡಿಸಿದರು. ಇನ್ನೂ ಕೆಲವರು ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಚಂದನ್, ನಾನು ಮಾಡಿರುವುದು ತಪ್ಪಾಗಿದ್ದರೆ ಕ್ಷಮಿಸಿ ಬಿಡಿ ಅಂದಿದ್ದಾರೆ. ಇತ್ತ ನಾವು ವೇದಿಕೆಯಲ್ಲಿ ಮದುವೆಯಾಗಿಲ್ಲ. ಒಂದು ವೇಳೆ ನಾವು ಅಲ್ಲಿ ಮದುವೆಯಾಗುತ್ತಿದ್ದರೆ ಅದನ್ನು ನಾನು ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ವೇದಿಕೆ ಮೇಲೆ ಮದುವೆ ಆಗಿದ್ರೆ ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ: ನಿವೇದಿತಾ ಗೌಡ
ಈ ಮಧ್ಯೆ ಉಸ್ತುವಾರಿ ಸಚಿವ ವಿ ಸೋಮಣ್ಣ ಪ್ರತಿಕ್ರಿಯಿಸಿ, ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ. ನಾಡಿನ ಅಧಿದೇವತೆಯ ನಾಡಹಬ್ಬದ ವೇದಿಕೆಯಲ್ಲಿ ಈ ರೀತಿ ಆಗಬಾರದಿತ್ತು. ತಪ್ಪೆಸಗಿರುವ ಅವರಿಬ್ಬರಿಗೂ ಬರುವ ಆರು ತಿಂಗಳಲ್ಲಿ ದೇವಿಯೇ ಶಿಕ್ಷೆ ನೀಡುತ್ತಾರೆ. ಈ ರೀತಿ ಆಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದಕ್ಕೆ ದಸರಾ ಉಪಸಮಿತಿ ಕಾರಣವಲ್ಲ. ಈ ಸಂಬಂಧ ಮೈಸೂರು ಜಿಲ್ಲಾ ಅಧೀಕ್ಷಕ ಹಾಗೂ ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷರೂ ಆಗಿರುವ ರಿಷ್ಯಂತ್ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾರಿಗೆ ಕಾರಣ ಕೇಳಿ ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಚಂದನ್-ನಿವೇದಿತಾ ನಿಶ್ಚಿತಾರ್ಥ ಮಾಡ್ಕೊಂಡಿರೋದು ಅಕ್ಷಮ್ಯ ಅಪರಾಧ- ವಿ.ಸೋಮಣ್ಣ