ಬೆಂಗಳೂರು: ಮರಗಳ್ಳತನ ಪ್ರಕರಣದಲ್ಲಿ ತನ್ನ ಸಹೋದರ ವಿಕ್ರಂ ಸಿಂಹನನ್ನು (Vikram Simha) ಬಂಧಿಸಿರುವ ಬಗ್ಗೆ ಸಂಸದ ಪ್ರತಾಪ್ ಸಿಂಹ (Pratap Simha) ಕೊನೆಗೂ ಮೌನ ಮುರಿದಿದ್ದಾರೆ.
FIR pic.twitter.com/LABDLtTth4
— Pratap Simha (@mepratap) December 30, 2023
Advertisement
ಪ್ರಕರಣದ ಎಫ್‌ಐಆರ್ ಪ್ರತಿಯನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್‌ಗೆ ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಯನ್ನು ಹಂಚಿಕೊಂಡಿರುವ ಸಂಸದ ‘ಎಫ್‌ಐಆರ್’ ಎಂದಷ್ಟೇ ಬರೆದಿದ್ದಾರೆ. ಇದನ್ನೂ ಓದಿ: ವಿಕ್ರಂ ಸಿಂಹ ಬಂಧನದಿಂದ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ – ಕಾಂಗ್ರೆಸ್ ಟ್ವೀಟ್
Advertisement
Advertisement
ಎಫ್‌ಐಆರ್ ಪ್ರತಿಯಲ್ಲಿ ಪ್ರಕರಣದ ಮೊದಲ ಆರೋಪಿ ರಾಕೇಶ್ ಶೆಟ್ಟಿ ಎಂದಿದೆ. 2ನೇ ಆರೋಪಿ ಜಯಮ್ಮ ಎಂದು ಉಲ್ಲೇಖಿಸಲಾಗಿದೆ. ಪ್ರಕರಣದ ಆರೋಪಿ ಅಲ್ಲದೇ ಇದ್ದರೂ ವಿಕ್ರಂ ಬಂಧನ ಎಂದು ಮಾರ್ಮಿಕವಾಗಿ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.
Advertisement
ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದ ಆರೋಪದಡಿ ವಿಕ್ರಂ ಸಿಂಹನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ
ಏನಿದು ಪ್ರಕರಣ?
ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿದ್ದು, ಈ ಸಂಬಂಧ ಬೇಲೂರು ಆರ್‌ಎಫ್‌ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಿದಿರುವ ಮರಗಳನ್ನು ಅರಣ್ಯ ಇಲಾಖೆ ಡಿಪೊದಲ್ಲಿ ಸಂಗ್ರಹಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಹಾಗೂ ಸಹೋದರನ ವಿರುದ್ಧ ಕಾಂಗ್ರೆಸ್ ಸೋಷಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿತ್ತು. ಅಣ್ಣ ಪ್ರತಾಪ್ ಸಿಂಹ ನಾಡಕಳ್ಳ, ತಮ್ಮ ವಿಕ್ರಂ ಸಿಂಹ ಕಾಡುಗಳ್ಳ ಎಂದು ಕಾಂಗ್ರೆಸ್ ಲೇವಡಿ ಮಾಡಿತ್ತು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ಕೊಡ್ತಿದೆ: ಅಶೋಕ್ ವಾಗ್ದಾಳಿ