– ಠುಸ್ಸಾಯ್ತಾ ಆಪರೇಷನ್ ಕಮಲ!
ಮೈಸೂರು: ಈ ವರ್ಷದ ಆರಂಭದಿಂದಲೂ ಸಂಕ್ರಾಂತಿಗೆ ಸಮ್ಮಿಶ್ರ ಸರ್ಕಾರ ಬೀಳುತ್ತೆ ಎಂದು ಬಿಜೆಪಿ ನಾಯಕರು ಪರೋಕ್ಷವಾಗಿ ಹೇಳುತ್ತ ಬಂದಿದ್ದರು. ಬಿಜೆಪಿ ಹಿರಿಯ ನಾಯಕ ಉಮೇಶ್ ಕತ್ತಿ ನಾನು ನುಡಿದ ಭವಿಷ್ಯ ನಿಜ ಆಗುತ್ತೆ ಎಂದು ಸೋಮವಾರ ಹೇಳಿದ್ದರು. ಇದೀಗ ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆ ಆಪರೇಷನ್ ಕಮಲ ವಿಫಲವಾಯ್ತಾ ಎಂಬ ಚರ್ಚೆಗೆ ಎಡೆಮಾಡಿಕೊಟ್ಟಿದೆ.
ಪ್ರತಾಪ್ ಸಿಂಹ ಹೇಳಿದ್ದೇನು?
ಜಗತ್ತಿನಲ್ಲಿ ಒಳ್ಳೆಯ ಬದಲಾವಣೆಗಳು ಆಗಬೇಕಿದೆ. ಚುನಾವಣೆಯಲ್ಲಿ ಅಲ್ಪ ಮತಗಳ ಹಿನ್ನಡೆಯಲ್ಲಿ ಸರ್ಕಾರ ರಚಿಸುವಲ್ಲಿ ನಾವು ವಿಫಲರಾಗಿದ್ದೇವೆ. ಯಡಿಯೂರಪ್ಪನವರು ಮುಖ್ಯಮಂತ್ರಿ ಖಚಿತ, ಸಂಕ್ರಾಂತಿ ಅಲ್ಲದಿದ್ದರೂ, ಯುಗಾದಿಯಾದ್ರೂ ಆಗ್ತಾರೆ ಎಂದು ಪರೋಕ್ಷವಾಗಿ ಹೇಳಿದರು. ಈ ಹೇಳಿಕೆ ಬೆನ್ನಲ್ಲೇ ಬಿಜೆಪಿಯ ಸಂಕ್ರಾಂತಿಯ ಮಹಾಕ್ರಾಂತಿ ಸುಳ್ಳಾಯ್ತಾ ಎಂಬ ಚರ್ಚೆ ಆರಂಭವಾಗಿದೆ.
Advertisement
Advertisement
ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ಶೇ.50 ರಷ್ಟು ಮತಗಳನ್ನು ಪಡೆಯಲು ಪ್ರಯತ್ನಿಸಬೇಕಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಮೋದಿ ಅವರು ಮತ್ತೊಮೆ ಪ್ರಧಾನಿ ಆಗಬೇಕು ಎಂಬ ಉದ್ದೇಶದಿಂದ ದೆಹಲಿ ನಡೆದ ಸಭೆಯಲ್ಲಿ ಚರ್ಚೆ ನಡೆದಿದೆ. ಬೇರೆ ಏನು ಚಟುವಟಿಕೆಗಳು ದೆಹಲಿಯಲ್ಲಿ ನಡೆದಿಲ್ಲ ಎಂದು ಹೇಳಿದರು.
Advertisement
ಕರ್ನಾಟಕದಲ್ಲಿ 20ರಿಂದ 22 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿಯನ್ನು ನೀಡಲಾಗಿದೆ. ದೆಹಲಿಯಲ್ಲಿ ನಡೆದ ಸಭೆಗೆ ಎಲ್ಲ ಶಾಸಕರು ಹಾಜರಾಗಿದ್ದರು. ಈ ವೇಳೆ ಎಲ್ಲರನ್ನು ಹಿಡಿದಿಟ್ಟುಕೊಂಡು ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಮಾಹಿತಿಗಳನ್ನು ಹೈಕಮಾಂಡ್ ಸಮ್ಮುಖದಲ್ಲಿ ಯಡಿಯೂರಪ್ಪವರು ನೀಡುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ತಿಳಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv