ಅದಕ್ಕೂ ಕ್ಷಮೆಯಾಚಿಸಿಬಿಡಿ, ಒಟ್ಟಿಗೇ ನಿಮ್ಮನ್ನ ಜನ ಕ್ಷಮಿಸಿಬಿಡುತ್ತಾರೆ: ಡಿಕೆಶಿಗೆ ಪ್ರತಾಪ್ ಸಿಂಹ ಟಾಂಗ್

Public TV
2 Min Read
DKSHI PRATAP SIMHA

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ವಿಚಾರವಾಗಿ ಕ್ಷಮೆ ಕೇಳಿದ್ದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಟಿಪ್ಪು ಜಯಂತಿ ಆಚರಣೆ ವಿಚಾರವಾಗಿ ಕ್ಷಮೆ ಕೇಳಿ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.

“ಡಿ.ಕೆ ಶಿವಕುಮಾರ್ ಅವರೇ, ವೀರಶೈವರನ್ನು ಒಡೆಯಲು ಪ್ರಯತ್ನಿಸಿದ್ದು ತಪ್ಪು ಎಂದು ಕ್ಷಮೆಯಾಚಿಸಿದ್ದೀರಿ ತುಂಬಾ ಸಂತೋಷ. ಟಿಪ್ಪು ಜಯಂತಿ ಮಾಡಿದ್ದೂ ತಪ್ಪು ಎಂದು ಅದಕ್ಕೂ ಕ್ಷಮೆಯಾಚಿಸಿಬಿಡಿ ಒಟ್ಟಿಗೇ ಕ್ಷಮಿಸಿಬಿಡುತ್ತಾರೆ ಜನರು” ಎಂದು ಪ್ರತಾಪ್ ಸಿಂಹ ಬರೆದುಕೊಂಡಿದ್ದಾರೆ.

tippu sultan

ಚಾಮುಂಡಿ ಬೆಟ್ಟದಲ್ಲಿ ನಡೆದ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಮಹಿಷಾ ದಸರಾ ಆಚರಿಸುವುದನ್ನು ತಡೆಯಬೇಕು. ಇಂತಹ ಆಚರಣೆಯಿಂದಾಗಿ ನಮ್ಮ ಭಾವನೆಗಳಿಗೆ ಧಕ್ಕೆ ಉಂಟಾಗುತ್ತಿದೆ. ಇದರ ಜೊತೆಯಲ್ಲಿ ಮೈಸೂರು ರಾಜವಂಶಸ್ಥರಿಗೆ ಕಿರುಕುಳ ನೀಡಿದ ವ್ಯಕ್ತಿಯ ಜಯಂತಿ ಮಾಡುವುದನ್ನು ನಿಲ್ಲಿಸಿ ಎಂದು ಟಿಪ್ಪು ಹೆಸರನ್ನು ಹೇಳದೇ ಟಿಪ್ಪು ಜಯಂತಿಯನ್ನು ರದ್ದು ಮಾಡಿ ಎಂದು ಸಿಎಂಗೆ ಮನವಿ ಮಾಡಿಕೊಂಡಿದ್ದರು.

ಮಾಧ್ಯಮಗಳು ಟಿಪ್ಪು ಜಯಂತಿಯನ್ನು ಈ ಬಾರಿ ಸರ್ಕಾರ ಕೈ ಬಿಡುತ್ತಾ ಎನ್ನುವ ಪ್ರಶ್ನೆಗೆ ಸಿಎಂ, ರಾಜ್ಯದ ಶಾಂತಿ ಕದಡುವ ಯಾವುದೇ ನಿರ್ಣಯಗಳನ್ನು ಕೈಗೊಳ್ಳುವುದಿಲ್ಲ. ಈಗ ದಸರಾ ಸಂಭ್ರಮದಲ್ಲಿ ಇದ್ದೇವೆ. ವಿವಾದಾತ್ಮಕ ವಿಚಾರಗಳ ಬಗ್ಗೆ ಏನನ್ನೂ ಹೇಳುವುದಿಲ್ಲ. ಮುಂದಿನ ದಿನಗಳಲ್ಲಿ ಜಯಂತಿ ಕುರಿತು ಯೋಚನೆ ಮಾಡಲಾಗುತ್ತದೆ ಎಂದು ಉತ್ತರಿಸಿದ್ದಾರೆ.

MYS Pratap simha 2 1

ಡಿಕೆ ಶಿವಕುಮಾರ್ ಹೇಳಿದ್ದು ಏನು?
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶರನ್ನವರಾತ್ರಿ ಅಂಗವಾಗಿ ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ನಡೆದ ಧರ್ಮಸಮ್ಮೇಳನ ಕಾರ್ಯಕ್ರಮದಲ್ಲಿ ಬುಧವಾರ ರಾತ್ರಿ ಭಾಗವಹಿಸಿದ್ದ ಡಿಕೆ ಶಿವಕುಮಾರ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದರು. ನಮ್ಮ ಸರ್ಕಾರದಲ್ಲಿ ನಾವು ದೊಡ್ಡ ತಪ್ಪನ್ನು ಮಾಡಿದ್ದೇವೆ. ಸರ್ಕಾರದವರು, ರಾಜಕೀಯದವರು ಧರ್ಮದ ವಿಚಾರದಲ್ಲಿ ಜಾತಿಯ ವಿಚಾರದಲ್ಲಿ ಕೈ ಹಾಕಬಾರದು. ನಮ್ಮ ಸರ್ಕಾರದಿಂದ ದೊಡ್ಡ ಅಪರಾಧವಾಗಿದೆ. ನಾನೂ ಸಹ ಆ ಸರ್ಕಾರದಲ್ಲಿ ಮಂತ್ರಿಯಾಗಿದ್ದೆ. ನಮ್ಮ ಬೇರೆ ಸಚಿವರು ವಿಭಿನ್ನವಾಗಿ ಮಾತನಾಡಿದರು. ಆದ್ರೆ ಸರ್ಕಾರದ ತೀರ್ಮಾನ ಆ ಸಂದರ್ಭದಲ್ಲಿ ಬೇಕಾದಷ್ಟು ಅಲ್ಲೋಲ ಕಲ್ಲೋಲ ಸೃಷ್ಟಿಯಾಯ್ತು. ರಾಜಕೀಯದಲ್ಲಿ ಅನೇಕ ವಿಭಿನ್ನವಾದ ಹೇಳಿಕೆಗಳನ್ನು ನಾವು ನೋಡಿದ್ದೇವೆ. ಯಾವುದೇ ಸರ್ಕಾರ ಧರ್ಮದಲ್ಲಿ ಕೈ ಹಾಕಬಾರದು ಎನ್ನೋದಕ್ಕೆ ಮೊನ್ನೆ ನಡೆದ ಜನಾಭಿಪ್ರಾಯವೇ ಸಾಕ್ಷಿ ಎಂದರು.

DKSHI mn

ಇದೇ ವೇಳೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಸಚಿವ ಡಿ ಕೆ ಶಿವಕುಮಾರ್, ದಯವಿಟ್ಟು ನಾವು, ಸರ್ಕಾರ ತಪ್ಪು ಮಾಡಿದ್ರೆ ನಿಮ್ಮ ಕ್ಷಮಾಪಣೆ ಇರಲಿ. ಹೃದಯತುಂಬಿ ನಮ್ಮನ್ನು ಕ್ಷಮಿಸಿ ಎಂದರು. ಇದೇ ವೇಳೆ ಧರ್ಮದಲ್ಲಿ ರಾಜಕಾರಣ ಮಾಡಬಾರದು. ರಾಜಕೀಯದ ಮೂಲಕ ಧರ್ಮ ಉಳಿಸಬೇಕು. ಧರ್ಮವನ್ನು ಹಾಳು ಮಾಡುವ ಕೆಲಸಕ್ಕೆ ಹೋಗಬಾರದು ಅಂತ ಅಭಿಪ್ರಾಯ ವ್ಯಕ್ತಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *