ಮಡಿಕೇರಿ: ಕರ್ನಾಟಕ ಅಭಿವೃದ್ಧಿಗೆ ಪೂರಕವಾಗಿ ಮೋದಿಯವರ ಸರ್ಕಾರ ಕಳೆದ 4 ವರ್ಷಗಳಲ್ಲಿ ಕೊಟ್ಟಿರುವ ಯೋಜನೆಗಳನ್ನು ನೋಡಿದ್ರೆ ರಾಜ್ಯ ಬಗ್ಗೆ ಅವರು ಎಷ್ಟು ಪ್ರೀತಿ ಕಾಳಜಿ ಹೊಂದಿದ್ದಾರೆ ಎಂಬುದು ಗೊತ್ತಾಗುತ್ತೆ ಅಂತ ಸಂಸದ ಪ್ರತಾಪ್ ಸಿಂಹ ಹೇಳಿದ್ರು.
ಪ್ರಧಾನಿ ಮೋದಿ ಸಮ್ಮಿಶ್ರ ಸರ್ಕಾರಕ್ಕೆ ಸಹಕಾರ ನೀಡಬೇಕು. ಇಲ್ಲದಿದ್ದರೇ ಒಕ್ಕಲಿಗ ಸಮುದಾಯ ಪ್ರಧಾನಿಗಳ ವಿರುದ್ಧ ನಿಲ್ಲುತ್ತದೆ ಎನ್ನುವ ಹೇಳಿಕೆ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ, ಮೋದಿಯವರು ಮಾಡಿದ ಕೆಲಸಗಳನ್ನು ಯಾರ ಬಳಿಯೂ ಪ್ರೂವ್ ಮಾಡುವ ಅಗತ್ಯವಿಲ್ಲ. ಈ ವಿಚಾರದ ಬಗ್ಗೆ ನಾನು ಹೆಚ್ಚು ಮಾತನಾಡುವ ಅಗತ್ಯವಿಲ್ಲ ಎಂದು ತಿಳಿಸಿದರು.
Advertisement
ಶ್ರೀಗಳು ಹೇಳಿದ್ದು ಏನು?
ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮಿಶ್ರ ಸರ್ಕಾರಕ್ಕೆ ಸಹಕಾರ ನೀಡಬೇಕು. ಇಲ್ಲದಿದ್ದರೆ ಒಕ್ಕಲಿಗ ಸಮುದಾಯ ಪ್ರಧಾನಿಗಳ ವಿರುದ್ಧ ನಿಲ್ಲುತ್ತದೆ. ಮುಖ್ಯಮಂತ್ರಿ ಸ್ಥಾನದಿಂದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇಳಿಸುವುದಕ್ಕೆ ಪ್ರಯತ್ನ ಸಲ್ಲದು. ಸಿಎಂ ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಹಕಾರ ನೀಡಬೇಕು. ಮಾಜಿ ಸಿಎಂ ಸದಾನಂದ ಗೌಡ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದಕ್ಕೆ ನಂತರದ ಚುನಾವಣೆಯಲ್ಲಿ ಬಿಜೆಪಿ ಸೋಲಬೇಕಾಯಿತು. ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದರು. ಕೊಟ್ಟ ಭರವಸೆಯಂತೆ ಡಿ.ಕೆ.ಶಿವಕುಮಾರ್ ಅವರು ನಡೆದುಕೊಂಡಿದ್ದಾರೆ ಎಂದು ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ಗುರುಗುಂಡಾ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದ್ದರು.
Advertisement
https://www.youtube.com/watch?v=GfPiU9X7Xm8
Advertisement
https://www.youtube.com/watch?v=40QtfNpVLEY