ಮೈಸೂರು: ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಮಾಡುತ್ತಿಲ್ಲವೇ? ಚರ್ಚ್ ಗಳಲ್ಲಿ ಸಂಡೆ ಮಾಸ್ ನಡೆಯುತ್ತಿಲ್ಲವೇ? ಹಾಗೇ ಸಾಮೂಹಿಕ ಗಣೇಶೋತ್ಸವ ಆಚರಣೆಗೂ ಅವಕಾಶ ನೀಡಿ ಎಂದು ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.
Advertisement
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ನಮಾಜ್, ಚರ್ಚ್ ಗಳಲ್ಲಿ ಸಂಡೆ ಮಾಸ್ ಗೆ ಅವಕಾಶ ನೀಡಲಾಗಿದೆ. ಹಾಗೆಯೇ ಗಣೇಶೋತ್ಸವಕ್ಕೂ ಅವಕಾಶ ನೀಡಿ. ಕೋವಿಡ್ ನಿಯಮಾವಳಿ ಕಟ್ಟುನಿಟ್ಟಿನ ಅನುಷ್ಠಾನ ಮಾಡಿ, ಅವಕಾಶ ಮಾಡಿಕೊಡಿ. ಅದ್ಧೂರಿಯಾಗಿಯೇ ಮಾಡಬೇಕೆಂದು ಹೇಳುತ್ತಿಲ್ಲ. ಆದರೆ ಉತ್ಸವ ನಡೆಯಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸುಳ್ಳು ಆಪಾದನೆ ಮಾಡಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ: ಜಗ್ಗೇಶ್
Advertisement
Advertisement
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲ ಅಂಶಗಳನ್ನು ಗಣನೆಗೆ ತಡಗೆದುಕೊಂಡಿದ್ದಾರೆ ಎಂಬ ವಿಶ್ವಾಸ ಇದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಸಂಸದರು ತಿಳಿಸಿದರು.
Advertisement
ಸಾಮೂಹಿಕ ಗಣೇಶೋತ್ಸವಕ್ಕೆ ಸರ್ಕಾರ ನಿರ್ಬಂಧ ಹೇರಿದ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಸಚಿವ ಸುನಿಲ್ ಕುಮಾರ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಸಹ ಸಾಮೂಹಿಕ ಗಣೇಶೋತ್ಸವಕ್ಕೆ ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೆ ಹಿಂದೂ ಪರ ಸಂಘಟನೆಗಳು ಸಹ ಸಾಮೂಹಿಕ ಗಣೇಶೋತ್ಸವಕ್ಕೆ ನಿರ್ಬಂಧ ಹೇರಿರುವುದನ್ನು ಖಂಡಿಸಿವೆ.