ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ (Siddaramaiah) ಪರವಾಗಿ ಇಂದು ಶಿವರಾಜ್ ಕುಮಾರ್ (Shivaraj Kumar) ಪ್ರಚಾರ ಮಾಡುತ್ತಿದ್ದಾರೆ. ವರುಣಾ (Varuna) ಕ್ಷೇತ್ರಕ್ಕೆ ಆಗಮಿಸಿರುವ ಶಿವಣ್ಣ, ಬೆಳಗ್ಗೆಯಿಂದಲೇ ಸಿದ್ಧರಾಮಯ್ಯನವರ ಪರವಾಗಿ ಮತಯಾಚನೆ ಮಾಡುತ್ತಿದ್ದರು. ಈ ಕುರಿತು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ (Pratap Simha) ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಮಣ್ಣನನ್ನು ಹೊಗಳುವ ಮೂಲಕ ಶಿವಣ್ಣನಿಗೆ ಟಾಂಗ್ ನೀಡಿದ್ದಾರೆ.
ಪ್ರತಾಪ್ ಸಿಂಹ ಟ್ವೀಟ್ ಮಾಡಿ, ‘ಪುನೀತ್ ರಾಜ್ ಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ. ಮನೆಮೆಚ್ಚಿ ಶ್ಲ್ಯಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ. ಅವರವರ ಭಾವ ಭಕುತಿಗೆ’ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:‘ಲವ್ ಅಗೇನ್’ ಎನ್ನುತ್ತಾ ಪತಿಯ ಎದುರಲ್ಲೇ ಪ್ರಿಯಾಂಕಾ ಬೇರೆ ನಟನ ಜೊತೆ ಕಿಸ್
ಕಳೆದ ಎರಡು ದಿನಗಳಿಂದ ಶಿವರಾಜ್ ಕುಮಾರ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಮಧು ಬಂಗಾರಪ್ಪ ಪರವಾಗಿ ಸೊರಬದಲ್ಲಿ ಮತಯಾಚನೆ ಮಾಡಿದ್ದಾರೆ. ರಮ್ಯಾ ಕೂಡ ಮಂಡ್ಯದಿಂದ ಪ್ರಚಾರ ಕಾರ್ಯ ಶುರು ಮಾಡಿದ್ದಾರೆ. ದುನಿಯಾ ವಿಜಯ್ ಕೇವಲ ಸಿದ್ಧರಾಮಯ್ಯನವರ ಪರವಾಗಿಯಷ್ಟೇ ಪ್ರಚಾರ ಮಾಡಲಿದ್ದಾರಂತೆ.
ಈ ಬಾರಿ ಸ್ಯಾಂಡಲ್ ವುಡ್ ಅನೇಕ ಕಲಾವಿದರು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಸುದೀಪ್ ಹತ್ತಾರು ಕ್ಷೇತ್ರಗಳಿಗೆ ಹೋಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ. ಹರ್ಷಿಕಾ ಪೂಣಚ್ಚ ಕೂಡ ಗದಗ ಮತ್ತು ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದಾರೆ. ನೆನಪಿರಲಿ ಪ್ರೇಮ್ ಸೇರಿದಂತೆ ಹಲವರು ಪ್ರಚಾರ ಕಾರ್ಯದಲ್ಲಿದ್ದಾರೆ.