ಮೈಸೂರು: ಮರಿ ಖರ್ಗೆ ಹೆಸರು ಗಂಡೋ ಅಥವಾ ಹೆಣ್ಣೋ ಎಂಬುವುದು ಗೊತ್ತೆ ಆಗುವುದಿಲ್ಲ ಎಂದು ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
Advertisement
ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣ ಸಂಚಲನ ಸೃಷ್ಟಿಸಿದೆ. ಶನಿವಾರ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಬಸವರಾಜ ಬೊಮ್ಮಾಯಿ ಅವರು ಗೃಹಸಚಿವರಾಗಿದ್ದಾಗ ಬಿಟ್ ಕಾಯಿನ್ ಹಗರಣ ನಡೆದಿದೆ. ಬಹುಕೋಟಿ ಹಗರಣದಲ್ಲಿ ಕರ್ನಾಟಕ ಸರ್ಕಾರವೇ ಭಾಗಿಯಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣದ ಹಿಂದೆ ಯಾರ‍್ಯಾರಿದ್ದಾರೆ ಖಂಡಿತವಾಗಿಯೂ ಬಲಿ ಹಾಕ್ತೇವೆ: ಬಸವರಾಜ ಬೊಮ್ಮಾಯಿ
Advertisement
Advertisement
ಸದ್ಯ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಅವರು ಸುದ್ದಿಗೋಷ್ಠಿ ನಡೆಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇದೇ ವೇಳೆ ನಾನು ಪತ್ರಿಕೋದ್ಯಮದಿಂದ ಬಂದಂತಹ ವ್ಯಕ್ತಿ. ನಾನು ಪತ್ರಿಕೆ ಮೂಲಕವೇ ಘರ್ಜಿಸಿದ್ದಂತವನು. ಪೇಪರ್ ಸಿಂಹ ಅಂದರೆ ನನಗೆ ಯಾವುದೇ ಬೇಸರ ಇಲ್ಲ. ಪ್ರತ್ರಿಕೋದ್ಯಮದ ಮೂಖಾಂತರ ಇಂದು ನಾನು ಮೈಸೂರು ಮತ್ತು ಕೊಡಗಿನಂತಹ ಕಷ್ಟದ ಎರಡು ಕ್ಷೇತ್ರಗಳಲ್ಲಿ ಸಂಸದನಾಗಿದ್ದೇನೆ. ನನ್ನ ಪ್ರಾಮಾಣಿಕ ಬರವಣಿಗೆ ಮೂಲಕ ನಾನು ಇಂದು ಈ ಸ್ಥಾನದಲ್ಲಿ ಕುಳಿತುಕೊಂಡಿದ್ದೇನೆ. ಆದ್ರೆ ನನ್ನನ್ನು ಪೇಪರ್ ಸಿಂಹ ಎಂದು ಹೇಳುತ್ತಿರುವ ಮರಿ ಖರ್ಗೆ ಹೆಸರು ಗಂಡೋ, ಹೆಣ್ಣೋ ಯಾರಿಗೂ ಗೊತ್ತೆ ಆಗುವುದಿಲ್ಲ. ಏಕೆಂದರೆ ಅವರು ರಾಜೀವ್ ಗಾಂಧಿ ಮಗಳ ಹೆಸರು ಇಟ್ಟುಕೊಂಡಿದ್ದಾರೆ. ಹೆಸರಲ್ಲೂ ಕೂಡ ಸ್ವಂತತೆ ಇಲ್ಲ ಎಂದು ಅಣುಕಿಸಿದ್ದಾರೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣದಲ್ಲಿ ಯಾವ ನಟರೂ ಇಲ್ಲ – ಕಾಂಗ್ರೆಸ್ ಆರೋಪಕ್ಕೆ ಸುಧಾಕರ್ ತಿರುಗೇಟು
Advertisement
ಸ್ವಂತತೆ ಇಲ್ಲದಂತಹ ವ್ಯಕ್ತಿಯನ್ನು ಚುನಾವಣೆಯಲ್ಲಿ ನಿಲ್ಲಿಸಿ ಸೋತು. ಮತ್ತೆ ಎರಡನೇ ಭಾರೀ ಅವರನ್ನು ಗೆಲ್ಲಿಸಿ. ನಾನು ಬದುಕಿದ್ದಾಗಲೇ ಅವರನ್ನು ಮಂತ್ರಿ ಮಾಡಬೇಕೆಂದು ಮಲ್ಲಿಕಾರ್ಜುನ ಖರ್ಗೆ ಅವರು ಬಾಬು ರಾವ್ ಚಿಂತನ್ ಸುಳಿ, ಜಾಧವ್ ಅವರನ್ನೆಲ್ಲಾ ಬದಿಗೊತ್ತಿ ಮಗನಿಗೆ ಮಂತ್ರಿ ಸ್ಥಾನ ಕೊಡಿಸಿ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಸರದಾರ ಅಂತ ಅನಿಸಿಕೊಂಡು ಖರ್ಗೆ ಅವರು ಮೂಲೆ ಕುಳಿತುಕೊಳ್ಳಬೇಕಾಯಿತು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅವ್ರೆ ಯಾರೋ ಬರೆದ್ಕೊಟ್ಟ ಬಜೆಟ್ ಓದಿದಂಗಲ್ಲಾ ಬಿಟ್ ಕಾಯಿನ್ ವಹಿವಾಟು: ಪ್ರತಾಪ್ ಸಿಂಹ
ಬಡವ, ನಿರ್ಗತಿಕ ಶೋಷಿತ ವರ್ಗದವರು ತುಳಿತಕ್ಕೊಳಗದವರು ಅಂತ ಅನಿಸಿಕೊಂಡು ಡಾಲರ್ಸ್ ಕಾಲೋನಿ, ಸದಾ ಶಿವನಗರದಲ್ಲಿ ನಾಲ್ಕು-ನಾಲ್ಕು ಮನೆ ಕಟ್ಟಿಕೊಂಡು, ಕಾಲಿಗೊಂದು, ಕೈಗೊಂದು ಬಿಎಂಡಬ್ಲೂ, ಆಡಿ ಕಾರುಗಳನ್ನು ಇಟ್ಟುಕೊಂಡು ಓಡಾಡುವಂತಹ ವ್ಯಕ್ತಿಗಳ ಬಾಯಿಂದ ಹಳೆಯ ಕಾಲದ ಕುರ್ತಾ ಹಾಕಿಕೊಂಡು ಓಡಾಡುವಂತಹ ನಮ್ಮ ನಳಿನ್ ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಆರೋಪಗಳನ್ನು ಕೇಳುವಂತಹದು ಅಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಆಗುತ್ತಿದೆ ಎಂದು ಪ್ರಿಯಾಂಕ ಖರ್ಗೆಗೆ ತಿರುಗೇಟು ನೀಡಿದ್ದಾರೆ.