ಬಾಗಲಕೋಟೆ: ವಿಜಯಪುರದ ಸಂಸದ ರಮೇಶ್ ಜಿಗಜಿಣಗಿಯವರಿಗೆ (Ramesh Jigajinagi) ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಕೂಡಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರದಿಂದ (Vijaypur) ಬಾಗಲಕೋಟೆ (Bagalkot) ಮಾರ್ಗದಲ್ಲಿ ಕಾರಿನಲ್ಲಿ ಬರುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ತುರ್ತು ಚಿಕಿತ್ಸಾ ವಾರ್ಡ್‍ನಲ್ಲಿ ಆಕ್ಸಿಜನ್ ಅಳವಡಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನಂದಿಬೆಟ್ಟದಲ್ಲಿ ಆತ್ಮಹತ್ಯೆ – ಒಂದೂವರೆ ತಿಂಗಳ ಬಳಿಕ ಶವ ಪತ್ತೆ
ಈ ಬಗ್ಗೆ ಆಸ್ಪತ್ರೆಯ ವೈದ್ಯ ಡಾ.ಸುಭಾಷ್ ಪಾಟೀಲ್ ಪ್ರತಿಕ್ರಿಯಿಸಿದ್ದು, ರಮೇಶ್ ಜಿಗಜಿಣಗಿ ಅವರು ಮದ್ಯಾಹ್ನ 3:30ಕ್ಕೆ ಆಸ್ಪತ್ರೆಗೆ ಬಂದಿದ್ದಾರೆ. ಈ ವೇಳೆ ಅವರ ಉಸಿರಾಟದಲ್ಲಿ ಏರುಪೇರಾಗಿತ್ತು. ಅಕ್ಸಿಜನ್ ಲೇವಲ್ ಕಮ್ಮಿ ಆಗಿತ್ತು. ಅಲ್ಲದೇ ಹೃದಯ ಬಡಿತದಲ್ಲಿ ವ್ಯತ್ಯಾಸ ಉಂಟಾಗಿತ್ತು. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.
ಜಿಗಜಿಣಗಿಯವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ, ಹೃದಯಾಘಾತ ಆಗಿಲ್ಲ. ಇಲ್ಲಿ ಬಂದ ಮೇಲೆ ಅಕ್ಸಿಜನ್ ಕೊಟ್ಟು, ಸಿಟಿ ಸ್ಕ್ಯಾನ್ ಹಾಗೂ ಇಸಿಜಿ ಮಾಡಿ ತಪಾಸಣೆ ಮಾಡಲಾಗಿದೆ. ಪುಪ್ಪಸದಲ್ಲಿ ಸ್ವಲ್ಪ ಪ್ರಮಾಣ ವಾಟರ್ ಕಂಟೆಂಟ್ ಸ್ಟೋರ್ ಆಗಿತ್ತು. ಮೊದಲಿನಿಂದಲೂ ಅವರಿಗೆ ಈ ಸಮಸ್ಯೆ ಇತ್ತು. ಚಿಕಿತ್ಸೆ ಕೊಟ್ಟ ಮೇಲೆ ಎಲ್ಲಾ ನಾರ್ಮಲ್ ಆಗಿದ್ದಾರೆ. ಯಾವುದೇ ಭಯಪಡುವ ಅಗತ್ಯವಿಲ್ಲ. ಎರಡು ದಿನಗಳಲ್ಲಿ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: 9ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ