ದಾವಣಗೆರೆ: ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಅವರು ಡಿ.9 ರಂದು ಸಿಹಿ ಸುದ್ದಿ ಕೊಡುತ್ತೇವೆ, ಕಾದು ನೋಡಿ ಎಂದು ಹೇಳಿದ್ದರು. ಆ ಸಿಹಿ ಸುದ್ದಿ ಇದೇ ಎಂದು ಮುಖ್ಯಮಂತ್ರಿ ಬಿಎಸ್‍ವೈ ಅವರ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.
ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶ ಇಂದು ಹೊರ ಬಿದ್ದಿದ್ದು, ಮತದಾರರ ತೀರ್ಪನ್ನು ಪ್ರತಿಪಕ್ಷಗಳು ಒಪ್ಪಿಕೊಳ್ಳಲೇಬೇಕಿದೆ. ಮೂರೂವರೆ ವರ್ಷ ರಾಜ್ಯದಲ್ಲಿ ಬಿಜೆಪಿ ನೇತೃತ್ವದಲ್ಲಿ ಸ್ಥಿರ ಸರ್ಕಾರ ಇರಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
Advertisement
Advertisement
ಡಿ.09ರಂದು ಸಿಹಿ ಸುದ್ದಿ ಕೊಡುತ್ತೇವೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಅನರ್ಹರು ಮನೆಗೆ ಹೋಗುತ್ತಾರೆ ಎಂದಿದ್ದರು. ಆದರೆ ಈಗ ಮತದಾರರು ಯಾರನ್ನು ಮನೆಗೆ ಕಳುಹಿಸಿದ್ದಾರೆ ಎಂಬುದು ಫಲಿತಾಂಶ ನೋಡಿದರೆ ಗೊತ್ತಾಗುತ್ತದೆ ಎಂದು ಲೇವಡಿ ಮಾಡಿದರು.
Advertisement
ಇನ್ನು ಜೆಡಿಎಸ್ ಪಕ್ಷ ಈಗ ಅಡ್ರೆಸ್ ಇಲ್ಲದಂತಾಗಿದೆ. ಡಿ.ಕೆ.ಶಿವಕುಮಾರ್ ವೀರಾವೇಶದ ಮಾತನಾಡಿದ್ದರು. ಸಿದ್ದರಾಮಯ್ಯರನ್ನು ಪ್ರತಿಪಕ್ಷದ ನಾಯಕನ ಸ್ಥಾನದಿಂದ ಕೆಳಗಿಳಿಸುವುದೇ ಖರ್ಗೆ ಅವರು ಕೊಡುವ ಸಿಹಿ ಸುದ್ದಿ ಎಂದು ಮಲ್ಲಿಕಾರ್ಜುನ್ ಖರ್ಗೆ ವಿರುದ್ದ ವ್ಯಂಗ್ಯವಾಡಿದರು.