ದಾವಣಗೆರೆ: ಸರ್ಕಾರಿ ಶಾಲೆಯ ವಾರ್ಷಿಕೋತ್ಸವದಲ್ಲಿ (School Day) ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಮಕ್ಕಳಿಗೆ ಹಿತನುಡಿ ಹೇಳುವ ಬದಲು ರಾಜಕೀಯ ಭಾಷಣ ಮಾಡಿದ್ದಕ್ಕೆ ಗ್ರಾಮಸ್ಥರು ಶಾಸಕರನ್ನು ತರಾಟೆಗೆ ತೆಗೆದುಕೊಂಡು, ಭಾಷಣ ನಿಲ್ಲಿಸುವಂತೆ ಹೇಳಿ ವೇದಿಕೆಯಿಂದ ಕೆಳಗೆ ಇಳಿಸಿರುವ ಘಟನೆ ದಾವಣಗೆರೆಯ (Davanagere) ನ್ಯಾಮತಿ ತಾಲೂಕಿನ ಚೀಲೂರು ಗ್ರಾಮದಲ್ಲಿ ನಡೆದಿದೆ.
Advertisement
ಚೀಲೂರು ಗ್ರಾಮದ ಸರ್ಕಾರಿ ಶಾಲೆಯ ವಾರ್ಷಿಕೋತ್ಸವದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಭಾಗವಹಿಸಿದ್ದರು. ಇದಕ್ಕೂ ಮುನ್ನ ಮಾಜಿ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ನಿರ್ಗಮಿಸಿದ್ದರು. ಈ ವೇಳೆ ರೇಣುಕಾಚಾರ್ಯ ಮಕ್ಕಳಿಗೆ ಹಿತನುಡಿ ಹೇಳುವ ಬದಲು ಮಾಜಿ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ – ಆರೋಗ್ಯವಾಗಿದ್ದೇನೆ ಎಂದ ಬರಗೂರು ರಾಮಚಂದ್ರಪ್ಪ
Advertisement
Advertisement
ಶಾಲಾ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ್ದಕ್ಕೆ ಕಿಡಿಯಾದ ಗ್ರಾಮಸ್ಥರು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಶಾಲಾ ಕಾರ್ಯಕ್ರಮ, ಇಲ್ಲಿ ರಾಜಕೀಯ ಬೇಡ ಎಂದು ಗ್ರಾಮಸ್ಥರು ವಾಗ್ದಾಳಿ ನಡೆಸಿದ್ದಾರೆ. ಬಳಿಕ ಭಾಷಣವನ್ನು ನಿಲ್ಲಿಸಿ, ಶಾಸಕರನ್ನು ವೇದಿಕೆಯಿಂದ ಕೆಳಗಿಳಿಸಿದ್ದಾರೆ. ಇದನ್ನೂ ಓದಿ: ನನ್ನನ್ನ ರಾಷ್ಟ್ರಪತಿ, ಪಿಎಂ ಮಾಡ್ತೀನಿ ಅಂದ್ರೂ ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k