ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದ ಸಾಧ್ವಿ ಪ್ರಜ್ಞಾಸಿಂಗ್

Public TV
1 Min Read
Sadhvi Pragya web

ನವದೆಹಲಿ: ನಾಥೂರಾಮ್ ಗೂಡ್ಸೆಯನ್ನು ದೇಶ ಭಕ್ತ ಎಂದು ಹೇಳುವ ಮೂಲಕ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ತೀವ್ರ ಚರ್ಚೆಗೆ ಗುರಿಯಾಗಿದ್ದಾರೆ.

ಲೋಕಸಭೆಯ ಅಧಿವೇಶನದಲ್ಲಿ ಸಾಧ್ವಿ ಈ ಹೇಳಿಕೆ ನೀಡಿದ್ದು, ಹೀಗೆ ಹೇಳುತ್ತಿದ್ದಂತೆ ವಿರೋಧ ಪಕ್ಷದ ನಾಯಕರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಡಿಎಂಕೆ ಸಂಸದ ಎ.ರಾಜಾ ಅವರು ವಿಶೇಷ ಭದ್ರತಾ ಪಡೆ (ಎಸ್‍ಪಿಜಿ) ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಏಕೆ ಕೊಲೆ ಮಾಡಿದರು ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಸಾಧ್ವಿ ಪ್ರಜ್ಞಾ ಸಿಂಗ್ ಮಧ್ಯೆ ಪ್ರವೇಶಿಸಿ, ದೇಶಭಕ್ತನ ಉದಾಹರಣೆಯನ್ನು ನೀವು ಈ ಸಂದರ್ಭದಲ್ಲಿ ಕೊಡಬೇಡಿ ಎಂದು ಕಿಡಿಕಾರಿದ್ದಾರೆ.

ಇದನ್ನು ಸ್ವತಃ ಗೋಡ್ಸೆ ಒಪ್ಪಿಕೊಂಡಿದ್ದಾರೆ. 32 ವರ್ಷಗಳಿಂದ ಗಾಂಧಿ ಮೇಲೆ ದ್ವೇಷ ಇತ್ತು ಹೀಗಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಮಹಾತ್ಮಾ ಗಾಂಧಿಯವರ ವಿಚಾರಧಾರೆಗಳು ಪ್ರತ್ಯೇಕವಾಗಿದ್ದರಿಂದ ಗೋಡ್ಸೆ ಅವರನ್ನು ಹತ್ಯೆ ಮಾಡಿದ ಎಂದು ರಾಜಾ ಅವರು ಲೋಕಸಭೆಯ ಕಲಾಪದಲ್ಲಿ ತಿಳಿಸಿದ್ದಾರೆ.

ರಾಜಾ ಅವರು ಮಾತನಾಡುತ್ತಿದ್ದ ವೇಳೆ ಸಾಧ್ವಿ ಪ್ರಜ್ಞಾ ಸಿಂಗ್ ಮಧ್ಯ ಪ್ರವೇಶಿಸಿದ್ದಕ್ಕೆ ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಲು ಪ್ರಾರಂಭಿಸಿದರು. ಆಗ ಬಿಜೆಪಿ ಸಂಸದರು ಸಾಧ್ವಿಯವರಿಗೆ ಕುಳಿತುಕೊಳ್ಳುವಂತೆ ಸೂಚಿಸಿದರು.

ಬೆದರಿಕೆಯನ್ನಾಧಿರಿಸಿ ಭದ್ರತೆ ಇರಬೇಕೆ ಹೊರತು, ರಾಜಕೀಯ ಕಾರಣಗಳಿಂದಲ್ಲ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದರು. ಇದಕ್ಕೆ ಸಂಸದ ರಾಜಾ ಪ್ರತಿಕ್ರಿಯಿಸಿ ಎಸ್‍ಪಿಜಿ ತಿದ್ದುಪಡಿ ಮಸೂದೆಯನ್ನು ಮರುಪರಿಶೀಲಿಸಬೇಕು ಎಂದು ಗೃಹ ಸಚಿವರಿಗೆ ಮನವಿ ಮಾಡಿದರು. ಈ ವೇಳೆ ಸದನದಲ್ಲಿ ಕೆಲ ಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.

Share This Article
Leave a Comment

Leave a Reply

Your email address will not be published. Required fields are marked *