ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಅಶಿಸ್ತಿನ ವರ್ತನೆ ತೋರಿದ್ದಕ್ಕೆ ಬುಧವಾರ ಸದನದಿಂದ ಅಮಾನತುಗೊಳಿಸಲಾಯಿತು.
ನಿನ್ನೆಯಷ್ಟೇ 19 ವಿರೋಧ ಪಕ್ಷಗಳ ಸಂಸದರನ್ನು ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸದನದಿಂದ ಅಮಾನತುಗೊಳಿಸಲಾಗಿತ್ತು. ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾವನೆಯನ್ನು ರಾಜ್ಯಸಭೆ ಬುಧವಾರ ಅಂಗೀಕರಿಸಿದೆ.
Advertisement
Advertisement
ಆಪ್ ಸಂಸದ ನಿನ್ನೆ ಘೋಷಣೆಗಳನ್ನು ಕೂಗಿ, ಕಾಗದಗಳನ್ನು ಹರಿದು ಕುರ್ಚಿಯತ್ತ ಎಸೆದಿದ್ದರು. ಈ ಹಿನ್ನೆಲೆಯಲ್ಲಿ ಪ್ರಸ್ತುತ ವಾರದ ಉಳಿದ ಭಾಗಕ್ಕೆ ರಾಜ್ಯಸಭೆಯಿಂದ ಅಮಾನತುಗೊಂಡಿದ್ದಾರೆ ಎಂದು ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ತಿಳಿಸಿದ್ದಾರೆ. ಇದನ್ನೂ ಓದಿ: ಜನನಿಬಿಡ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯ: ಪೊಲೀಸ್ ಇಲಾಖೆ ನೋಟಿಸ್
Advertisement
ಸಂಜಯ್ ಸಿಂಗ್ ಅವರ ಈ ವರ್ತನೆಯು ಸದನದ ನಿಯಮಗಳು ಮತ್ತು ಅಧ್ಯಕ್ಷರ ಅಧಿಕಾರವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ರಾಜ್ಯಸಭಾ ಉಪಸಭಾಪತಿ ಹೇಳಿದ್ದಾರೆ. ಈ ಹಿಂದೆ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿರೋಧ ಪಕ್ಷದ 19 ಸಂಸದರನ್ನು ಸದನದಿಂದ ಅಮಾನತುಗೊಳಿಸಲಾಗಿತ್ತು. ಇದನ್ನೂ ಓದಿ: ಪಿಎಂಎಲ್‌ಎ ಅಡಿ ಬಂಧನ ಮಾಡಬಹುದು – ಇಡಿಗೆ ಸುಪ್ರೀಂನಿಂದ ಸಿಕ್ತು ಪರಮಾಧಿಕಾರ