ಮಂಡ್ಯ: ಜೆಡಿಎಸ್ ವಿರುದ್ಧ ಮುಗಿಬೀಳುತ್ತಿರೋ ಸುಮಲತಾ ವಿರುದ್ಧ ಸಂಸದ ಶಿವರಾಮೇಗೌಡ ಕಿಡಿಕಾರಿದ್ದಾರೆ.
ನಾಗಮಂಗಲ ಪಟ್ಟಣದ ಮಲ್ಲೇನಹಳ್ಳಿ ಸಮೀಪ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷೇತರ ಅಭ್ಯರ್ಥಿ ಸುಮಲತಾ ಮಂಡ್ಯ ಗೌಡ್ತಿಯೇ ಎಂದು ಪ್ರಶ್ನಿಸಿ ಮತ್ತೆ `ಗೌಡ್ತಿ’ ಹೇಳಿಕೆಯನ್ನು ಕೆಣಕಿದ್ದಾರೆ.
ಗೌಡ್ತಿ ಹೇಳಿಕೆ ನೀಡಿ ಭಾರೀ ವಿರೋಧಕ್ಕೆ ಗುರಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಸಮ್ಮುಖದಲ್ಲೆ ಸುಮಲತಾ ಮಂಡ್ಯ ಗೌಡ್ತಿಯಲ್ಲ ಎಂದು ಸಂಸದರು ಗುಡುಗಿದ್ದಾರೆ. ಸುಮಲತಾ ಹುಚ್ಚೇಗೌಡರ ಸೊಸೆ ಎನ್ನುವುದರಲ್ಲಿ ಅರ್ಥವಿಲ್ಲ ಅವರು ನಾಯ್ಡು ಆಗಿದ್ದಾರೆಯೇ ಹೊರತು ಮಂಡ್ಯ ಗೌಡ್ತಿಯಲ್ಲ ಅಂದ್ರು. ಇದನ್ನೂ ಓದಿ: ಅಂಬಿ ಫ್ಯಾನ್ಸ್, ಜೆಡಿಎಸ್ ನಡುವೆ ಗೌಡ್ತಿ ಫೈಟ್!- ವೈರಲ್ ಆಯ್ತು ಸಿಎಂ ತೆಲಗು ಸಂದರ್ಶನ
ಅಂಬರೀಶ್ ಶವ ಸಂಸ್ಕಾರಕ್ಕೆ ಸೇರಿದ ಜನಸಾಗರ ಕಂಡು ಮಂಡ್ಯ ಚುನಾವಣೆಗೆ ಬಂದಿದ್ದಾರೆ. ಅವರು ನಿಜವಾಗಲು ಒಕ್ಕಲಿಗರಾ ಎಂದು ಪ್ರಶ್ನಿಸಿದ ಶಿವರಾಮೇ ಗೌಡ, ಸುಮಲತಾ ಮತ್ತು ಬೆಂಬಲಿಗರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಸುರೇಶ್‍ಗೌಡ ಕರೆ ತಂದ ರಮ್ಯರನ್ನ ಓಡಿಸಿದ್ದೇನೆ. ಅಂಬರೀಶ್‍ರನ್ನೂ ಕರೆತಂದವನು ನಾನೇ, ಅವರನ್ನ ಸೋಲಿಸಿದವನು ನಾನೇ. ನಾನು ನಾಗಮಂಗಲದ ಗಂಡು ಎಂದು ಸುವಲತಾ ವಿರುದ್ಧ ಕಿಡಿಕಾರಿದ್ರು. ಇದನ್ನೂ ಓದಿ: ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ: ಕೆ.ಟಿ.ಶ್ರೀಕಂಠೇಗೌಡ