ದಾವಣಗೆರೆ: ಕರ್ನಾಟಕವನ್ನು ಬೇರ್ಪಡಿಸುವ ಕೆಲಸವನ್ನು ಯಾರು ಮಾಡಬಾರದು. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರ್ನಾಟಕವನ್ನು ಬೇರ್ಪಡಿಸುವುದು ಕಾಂಗ್ರೆಸ್ ಹಾಗೂ ಜೆಡಿಎಸ್ ಚಾಳಿಯಾಗಿದೆ. ಈ ಹಿಂದೆ ಬೆಂಗಳೂರನ್ನು ಮೂರು ಭಾಗ ಮಾಡಲು ಹೊರಟಿದ್ದರು. ಆದರೆ ಅದಕ್ಕೆ ಬಿಜೆಪಿ ಅವಕಾಶ ಕೊಟ್ಟಿರಲ್ಲಿಲ್ಲ. ಬಳಿಕ ವೀರಶೈವ ಲಿಂಗಾಯಿತ ಧರ್ಮವನ್ನು ಒಡೆಯಲು ಹೊರಟಿದ್ದರು. ಈಗ ಜೆಡಿಎಸ್ ಕಾಂಗ್ರೆಸ್ ರಾಜ್ಯವನ್ನು ಒಡೆಯುವ ಮಾತನ್ನಾಡುತ್ತಿದ್ದಾರೆ ಎಂದು ಆರೋಪಿಸಿದರು.
Advertisement
Advertisement
ಕರ್ನಾಟಕದ ಜನ ಇದಕ್ಕೆ ಯಾವುದೇ ಕಾರಣಕ್ಕೂ ಒಪ್ಪಿಗೆ ನೀಡುವುದಿಲ್ಲ. ಸಿಎಂ ಕುಮಾರಸ್ವಾಮಿ ಅಖಂಡ ಕರ್ನಾಟಕದ ಪರ ಕೆಲಸ ಮಾಡಬೇಕು. ಅದನ್ನು ಬಿಟ್ಟು 38 ಶಾಸಕರಿಗೆ ಹಾಗೂ ನಾಲ್ಕೈದು ಜಿಲ್ಲೆಗಳಿಗೆ ಮಾತ್ರ ಮುಖ್ಯಮಂತ್ರಿಯಾಗಿ ಕೆಲಸ ಮಾಡಬಾರದು ಎಂದರು.
Advertisement
ಮಾಜಿ ಸಿಎಂ ಯಡಿಯೂರಪ್ಪ ಅವರ ಅವಧಿಯಲ್ಲಿ ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದರು. ಅದರಲ್ಲೂ ಉತ್ತರ ಕರ್ನಾಟಕಕ್ಕೆ ಸಾಕಷ್ಟು ಅನುದಾನ ನೀಡಿದ್ದರು. ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಮಾಡಿ ಹೆಚ್ಚಿನ ಸ್ಥಾನಮಾನ ನೀಡಿದ್ದರು. ಆದರೆ ಈಗ ಕುಮಾರಸ್ವಾಮಿಯವರು ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.